ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋಚಿಂಗ್ ಸೆಂಟರ್​ನ ಶಿಕ್ಷಕರ ಮೇಲೆ ಗುಂಡು ಹಾರಿಸಿದ ಇಬ್ಬರು ವಿದ್ಯಾರ್ಥಿಗಳು!

Twitter
Facebook
LinkedIn
WhatsApp
ಕೋಚಿಂಗ್ ಸೆಂಟರ್​ನ ಶಿಕ್ಷಕರ ಮೇಲೆ ಗುಂಡು ಹಾರಿಸಿದ ಇಬ್ಬರು ವಿದ್ಯಾರ್ಥಿಗಳು!

ಗುರುವನ್ನು ದೇವರಂತೆ ಕಾಣಬೇಕು ಎಂಬುದನ್ನು ಪ್ರತಿಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಹೇಳಿಕೊಡುತ್ತಾರೆ. ಮಕ್ಕಳಿಗೆ ಪೋಷಕರ ಮಾತಿಗಿಂತಲೂ ಶಿಕ್ಷಕರು ಹೇಳಿದ್ದಾರೆಂದರೆ ಚಾಚೂ ತಪ್ಪದೆ ಆ ಕೆಲಸವನ್ನು ಮಾಡುತ್ತಾರೆ. ಶಿಕ್ಷಕರ ಮೇಲೆ ಅಷ್ಟು ಗೌರವವಿರುತ್ತದೆ. ಆದರೆ ಆಗ್ರಾದ ಕೋಚಿಂಗ್ ಸೆಂಟರ್​ನ ಶಿಕ್ಷಕರೊಬ್ಬರ ಮೇಲೆ ಇಬ್ಬರು ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ನಡೆದಿದೆ. ಅಲ್ಲೇ ಇದ್ದ ಜನರು ತರಾತುರಿಯಲ್ಲಿ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದಾದ ನಂತರ ಆರೋಪಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆದರಿಕೆ ಹಾಕುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಗುಂಡು ಹಾರಿಸಿದ್ದೇವೆ ಅಷ್ಟೆ, ಇನ್ನೂ 39 ಬಾಕಿ ಇದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ವಿಡಿಯೋವನ್ನು ಗಮನಿಸಿದ ಆಗ್ರಾ ಪೊಲೀಸರು ಆರೋಪಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಇದಾದ ನಂತರ ಆರೋಪಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆದರಿಕೆ ಹಾಕುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಗುಂಡು ಹಾರಿಸಿದ್ದೇವೆ ಅಷ್ಟೆ, ಇನ್ನೂ 39 ಬಾಕಿ ಇದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ವಿಡಿಯೋವನ್ನು ಗಮನಿಸಿದ ಆಗ್ರಾ ಪೊಲೀಸರು ಆರೋಪಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಅಷ್ಟರಲ್ಲಿ ಅವರ ಇಬ್ಬರು ಹಳೆ ವಿದ್ಯಾರ್ಥಿಗಳು ಬೈಕ್ ನಲ್ಲಿ ಬಂದಿದ್ದು, ಒಬ್ಬರು ಶಿಕ್ಷಕರನ್ನು ಕರೆದಿದ್ದರು. ಹೊರಗೆ ಬಂದ ತಕ್ಷಣ ವಿದ್ಯಾರ್ಥಿಯೊಬ್ಬ ಬಂದೂಕು ತೆಗೆದು ಶಿಕ್ಷಕರ ಕಾಲಿಗೆ ಗುಂಡು ಹಾರಿಸಿದ. ಗುಂಡು ಅವರ ಕಾಲನ್ನು ತೂರಿಕೊಂಡು ಹೊರಬಂದಿತ್ತು. ಗುಂಡಿನ ಶಬ್ದ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಆರೋಪಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ ಇಬ್ಬರೂ ವಿದ್ಯಾರ್ಥಿಗಳು ಅಪ್ರಾಪ್ತರು. ಸದ್ಯ ಅವರಿಗಾಗಿ ಶೋಧ ನಡೆಸಲಾಗುತ್ತಿದೆ.

ಆರೋಪಿ ವಿದ್ಯಾರ್ಥಿಗಳ ಸಾಮಾಜಿಕ ಜಾಲತಾಣ ಖಾತೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿದ್ಯಾರ್ಥಿಗಳು ಈ ಬೆದರಿಕೆಯ ವಿಡಿಯೋವನ್ನು ತಮ್ಮ ಖಾತೆಯಿಂದ ವೈರಲ್ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ