ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ; ಪ್ರಮುಖ ಆರೋಪಿ ಬಂಧನ!

Twitter
Facebook
LinkedIn
WhatsApp
5f662761015173.5a607b3183450 1

ಇಂಫಾಲ: ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿರೇನ್ ಸಿಂಗ್ ಅವರು, ವಿಡಿಯೋವನ್ನು ನೋಡಿ ಬಹಳ ನೋವಾಗಿದೆ. ಮಾನವೀಯತೆ ಮೇಲೆ ನಡೆದ ಅಪರಾಧವಿದು. ದುಷ್ಕರ್ಮಿಗಳ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಕಳೆದ ರಾತ್ರಿ 1.30ರ ಸುಮಾರಿಗೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳಿಗೆ ಮರಣದಂಡನೆ ವಿಧಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಲಿದೆ. ಪ್ರತಿಯೊಬ್ಬರೂ ಇಂತಹ ಘಟನೆಯನ್ನು ಖಂಡಿಸಬೇಕು ಎಂದು ತಿಳಿಸಿದ್ದಾರೆ.

ಈ ನಡುವೆ ಮಹಿಳೆಯರ ಬೆತ್ತಲೆಗೊಳಿಸಿದ ಪ್ರಕರಣವನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಈ ಘಟನೆಯಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದ್ದು, ಈ ಘಟನೆ ತುಂಬಾ ನೋವುಂಟು ಮಾಡಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮವಾಗಲಿದೆ, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ರಾಯಗಢದಲ್ಲಿ ಭೂಕುಸಿತ, 5 ಸಾವು, ಹಲವು ಮಂದಿಗೆ ಗಾಯ

ಮುಂಬೈ, ಜು.20: ಇಂದು ಮುಂಜಾನೆ ಮಹಾರಾಷ್ಟ್ರದ (Maharashtra) ರಾಯಗಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಸುಮಾರು 48 ಕುಟುಂಬಗಳು ಇದರ ಪರಿಣಾಮವನ್ನು ಎದುರಿಸುತ್ತಿದೆ. ಈ ಘಟನೆಯಿಂದ 5 ಜನ ಸಾವನ್ನಪ್ಪಿದ್ದು, ಅನೇಕರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಿಳಿಸಿದೆ. ಇದೀಗ ಎನ್‌ಡಿಆರ್‌ಎಫ್​​ನ ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ರಾಯಗಢದ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ 22 ಜನರನ್ನು ರಕ್ಷಿಸಿದ್ದು, ಇನ್ನೂ ಹಲವರು ಮಂದಿ ಅವಶೇಷಗಳೊಳಗೆ ಸಿಕ್ಕಿಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನೂ ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ಎನ್‌ಡಿಆರ್‌ಎಫ್, ಸ್ಥಳೀಯರು ಮತ್ತು ಕೆಲವು ಎನ್‌ಜಿಒಗಳ ಸಹಾಯ ಪಡೆಯುತ್ತಿದ್ದೇವೆ ಎಂದು ರಾಯಗಢ ಪೊಲೀಸರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದು. ಇದರ ಜತೆಗೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡ ರಾಯಗಢದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭೂಕುಸಿತದಿಂದ ಸಾವನ್ನಪ್ಪಿರುವವರಿಗೆ ಸಂತಾಪ ಸೂಚಿಸಿದ್ದು, ಈ ಘಟನೆ ಬಗ್ಗೆ ನಿನ್ನೆ ರಾತ್ರಿಯಿಂದ ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಎಲ್ಲ ಮಾಹಿತಿಗಳನ್ನು ಪಡೆಯುತ್ತಿದ್ದೇನೆ, ಎನ್‌ಡಿಆರ್‌ಎಫ್‌ನ ಎರಡು ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದೆ, ಆದರೆ ನೆನ್ನೆ ರಾತ್ರಿ ಭಾರೀ ಮಳೆಯಿಂದಾಗಿ ಕಾರ್ಯಚರಣೆಗೆ ಸ್ವಲ್ಪ ಕಷ್ಟವಾಗಿತ್ತು, ಇದೀಗ ಕಾರ್ಯಚರಣೆಗೆ ವೇಗ ಸಿಕ್ಕಿದೆ ಎಂದು ಹೇಳಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಒಟ್ಟು 48 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು, ಇಲ್ಲಿಯವರೆಗೆ ಸುಮಾರು 75 ಜನರನ್ನು ಸ್ಥಳಾಂತರಿಸಲಾಗಿದೆ. ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಈ ಕುಟುಂಬಗಳಿಗೆ ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ. ಮೃತರ ಮತ್ತು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist