ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Twitter
Facebook
LinkedIn
WhatsApp
ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಮೀನು ಹಿಡಿಯಲು (Fishing) ತೆರಳಿದ್ದ ಇಬ್ಬರು ಯುವಕರು (Youths) ನೀರು ಪಾಲಾದ ಘಟನೆ ಶಿವಮೊಗ್ಗದ (Shivamogga) ಕುರುಬರಪಾಳ್ಯ ಬಳಿ ನಡೆದಿದೆ. ತುಂಗಾನದಿಯಲ್ಲಿ ನೀರು ಪಾಲಾದವರನ್ನು ಮಹಮ್ಮದ್ ಫೈಸಲ್ (19) ಹಾಗೂ ಅಂಜುಂಖಾನ್ (19) ಎಂದು ಗುರುತಿಸಲಾಗಿದೆ.

ಸವಾಯಿಪಾಳ್ಯದ ಮಹಮ್ಮದ್ ಫೈಸಲ್ ಹಾಗೂ ಇಲಿಯಾಜ್ ನಗರದ ಅಂಜುಂಖಾನ್ ಪದವಿ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಸೋಮವಾರ ಮಧ್ಯಾಹ್ನ ತುಂಗಾನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಇಬ್ಬರೂ ನೀರು ಪಾಲಾಗಿದ್ದು, ಮಹಮ್ಮದ್ ಫೈಸಲ್ ಮೃತದೇಹ ಪತ್ತೆಯಾಗಿದೆ. ಅಂಜುಂಖಾನ್ ಮೃತದೇಹಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನೆಯಿಂದ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – ಓರ್ವ ಸಾವು

ಚಾಮರಾಜನಗರ: ಶವಸಂಸ್ಕಾರಕ್ಕೆ (Cremation) ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ (Honeybee Attack) ನಡೆಸಿ ಓರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ (Kollegala) ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚೆನ್ನಪ್ಪ (60) ಎಂಬವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಸ್ಮಶಾನದಲ್ಲಿ ಶವಕ್ಕೆ ಪೂಜೆ ಸಲ್ಲಿಸಿ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು ದಾಳಿ ಮಾಡಿವೆ. 

ಈ ಪೈಕಿ ಚೆನ್ನಪ್ಪ ಅವರು ಹೆಜ್ಜೇನು ದಾಳಿಗೆ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಅಸುನೀಗಿದ್ದಾರೆ. ಉಳಿದ 10 ಮಂದಿ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪೈಕಿ ಒಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ