ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ!

Twitter
Facebook
LinkedIn
WhatsApp
U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ!

ಜ್ಯೂರಿಚ್: ಭಾರತೀಯ ಫುಟ್ಬಾಲ್ ಮೇಲಿನ ಕಾರ್ಮೋಡ ಅಂತ್ಯಗೊಂಡಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿಯಾದ ಫಿಫಾ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದೆ. ಇದರೊಂದಿಗೆ ಅಂಡರ್-17 ಮಹಿಳಾ ವಿಶ್ವಕಪ್ 2022ರ ಆತಿಥ್ಯವನ್ನು ಭಾರತಕ್ಕೆ ಮತ್ತೆ ನೀಡಲಾಗಿದೆ.

ಎಐಎಫ್‌ಎಫ್ ಕಾರ್ಯಕಾರಿ ಸಮಿತಿಯು ದೈನಂದಿನ ವ್ಯವಹಾರಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ನಂತರ ಫಿಫಾ ಈ ನಿರ್ಧಾರವನ್ನು ತೆಗೆದುಕೊಂಡಿದೆ. FIFA ಮತ್ತು ಏಷ್ಯನ್ ಫುಟ್‌ಬಾಲ್ ಫೆಡರೇಶನ್(AFC) AIFF ನಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ ಮತ್ತು ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸುವಲ್ಲಿ AIFF ಅನ್ನು ಬೆಂಬಲಿಸುತ್ತದೆ.

ಫಿಫಾ ತನ್ನ ಹೇಳಿಕೆಯಲ್ಲಿ, ‘ಆಗಸ್ಟ್ 25ರಂದು ತಕ್ಷಣವೇ ಜಾರಿಗೆ ಬರುವಂತೆ ಎಐಎಫ್‌ಎಫ್ ಅಮಾನತುಗೊಳಿಸುವಿಕೆಯನ್ನು ತೆಗೆದುಹಾಕಲು ಕೌನ್ಸಿಲ್ ನಿರ್ಧರಿಸಿದೆ. ಈಗ FIFA U-17 ಮಹಿಳಾ ವಿಶ್ವಕಪ್ 11ರಿಂದ ಅಕ್ಟೋಬರ್ 30ರವರೆಗೆ ಭಾರತದಲ್ಲಿ ಹಳೆಯ ಯೋಜನೆಯ ಪ್ರಕಾರ ಆಯೋಜಿಸಬಹುದು. ಎಐಎಫ್‌ಎಫ್‌ನ ವ್ಯವಹಾರಗಳನ್ನು ನಡೆಸಲು ನೇಮಿಸಲಾಗಿದ್ದ ಆಡಳಿತಾಧಿಕಾರಿಗಳ ತ್ರಿಸದಸ್ಯ ಸಮಿತಿಯನ್ನು ವಜಾಗೊಳಿಸಿದ ನಂತರ ಮತ್ತು ಎಐಎಫ್‌ಎಫ್ ಆಡಳಿತವು ಸಂಘದ ದೈನಂದಿನ ವ್ಯವಹಾರಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿರುವುದನ್ನು ದೃಢಪಡಿಸಿದ ನಂತರ ಈ ನಿರ್ಧಾರ ಹೊರಬಂದಿದೆ.

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (AIFF) ಅನ್ನು ಅಂತಾರಾಷ್ಟ್ರೀಯ ಫುಟ್ಬಾಲ್ ಸಮಿತಿ (ಫೀಫಾ) ನಿಷೇಧಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ನೀಡಿತ್ತು. ಎಐಎಫ್‌ಎಫ್‌ನ ವ್ಯವಹಾರಗಳನ್ನು ನಿರ್ವಹಿಸಲು, ಶೀಘ್ರದಲ್ಲೇ ಚುನಾವಣೆಗಳನ್ನು ನಿರ್ವಹಿಸಲು ಸಿಒಎ ಆದೇಶವನ್ನು ಭಾರತ ಫುಟ್‌ಬಾಲ್ ಫೆಡರೇಶನ್ ಆಡಳಿತಾಧಿಕಾರಿಗಳ ಸಮಿತಿ ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಕೊನೆಗೊಳಿಸಿದೆ.

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ವ್ಯವಹಾರಗಳನ್ನು ನಿರ್ವಹಿಸಲು ಆಡಳಿತಾಧಿಕಾರಿಗಳ ಸಮಿತಿಯ (ಸಿಒಎ) ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಕೊನೆಗೊಳಿಸಿದ್ದು, ಈ ಹಿಂದೆ ಆಗಸ್ಟ್ 28 ರಂದು ಎಐಎಫ್‌ಎಫ್‌ಗೆ ನಿಗದಿಯಾಗಿದ್ದ ಚುನಾವಣೆಯನ್ನು ಒಂದು ವಾರ ಮುಂದೂಡಿದೆ. ಬದಲಾದ ಚುನಾವಣಾ ಸಂಸ್ಥೆ ಮತ್ತು ನಾಮನಿರ್ದೇಶನಗಳ ಸಲ್ಲಿಕೆಗೆ ಹೊಸ ನಿಯಮಗಳನ್ನು ಅನುಸರಿಸಲು ಅವಕಾಶ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist