ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ
Twitter
Facebook
LinkedIn
WhatsApp
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗೇರುಬೀಜ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಬಿದ್ದ ಘಟನೆ ಉಡುಪಿಯ ಬಲಾಯಿಪಾದೆ ಕ್ರಾಸ್ ನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಗೇರುಬೀಜ ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ.