ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ – ದ್ವಿತಿಯ ಪಿಯುಸಿ ವಿಧ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ

Twitter
Facebook
LinkedIn
WhatsApp
ಉಡುಪಿ – ದ್ವಿತಿಯ ಪಿಯುಸಿ ವಿಧ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ

ಉಡುಪಿ, ಜನವರಿ 31: ದ್ವಿತಿಯ ಪಿಯುಸಿ ವಿಧ್ಯಾರ್ಥಿಯೊಬ್ಬನ ಮೇಲೆ ಆತನ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿಧ್ಯಾರ್ಥಿಯನ್ನು ಪ್ರತೀಕ್ (17) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

ಪ್ರತೀಕ ಸೆಕೆಂಡ್ ಹ್ಯಾಂಡ್ ಬೈಕ್ ಅನ್ನು ಖರೀದಿಸಿದ್ದನು. ಈ ಬೈಕ್​​​ ಅನ್ನು ಸಹಪಾಠಿ ಸುಹಾಸ್​ ಕದ್ದಿದ್ದಾನೆಂದು ಪ್ರತೀಕ್​ ಆರೋಪ ಮಾಡಿದ್ದಾನೆ. ಪ್ರತೀಕ್​​ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾನೆ ಎಂದು ಕೋಪಗೊಂಡಿದ್ದ ಸಹಾಸ್ ಜನವರಿ 28 ರ ಸಂಜೆ ಸುಹಾಸ್​ ಮತ್ತು ಆತನ ಸ್ನೇಹಿತ ತರುಣ್ ಕರೆ ಮಾಡಿ, ಪ್ರತೀಕ್​ನನ್ನು ಅವಾಚ್ಯವಾಗಿ ನಿಂದಿಸಿದರು. ಬಳಿಕ ಸುಹಾಸ್ ಜನವರಿ 29 ರಂದು ಮಧ್ಯಾಹ್ನ 12:15ರ ಸುಮಾರಿಗೆ ಪ್ರತೀಕ್‌ನನ್ನು ಎಂಜಿಎಂ ಮೈದಾನಕ್ಕೆ ಕರೆಸಿಕೊಂಡಿದ್ದಾನೆ. ಅಲ್ಲಿಗೆ ಬಂದ ಪ್ರತೀಕ್‌ಗೆ ಸುಹಾಸ್, ಮೋನಿಶ್, ತರುಣ್ ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದರು. ಇದೆ ವೇಳೆ ತರುಣ್ ಪ್ರತೀಕ್‌ನ ಹೊಟ್ಟೆ ಮತ್ತು ಎಡ ಸೊಂಟಕ್ಕೆ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ.

ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ 143, 147, 148, 323, 324, 504, 506, 307, ಮತ್ತು 149 ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದುಗಳು ತಮ್ಮ ಮನೆಗಳ ಮೇಲೆ ಹನುಮ ಧ್ವಜ ಹಾರಿಸಿ: ಶಾಸಕ ಯಶ್ಪಾಲ್ ಸುವರ್ಣ ಕರೆ

ಉಡುಪಿ : ರಾಜ್ಯದ ಪ್ರತಿಯೊಬ್ಬ ಹಿಂದುವೂ ತಮ್ಮ ತಮ್ಮ ಮನೆಗಳ ಮೇಲೆ ಹನುಮ ದ್ವಜ ಹಾರಿಸಿ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಬೇಕು ಎಂದು  ಉಡುಪಿ ಶಾಸಕ ಯಶ್ಪಾಲ್ ಸುವರ್ಣ  ಕರೆ ನೀಡಿದ್ದಾರೆ.

ಸಿದ್ಧರಾಮಯ್ಯ ನೇತೃತ್ವದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಮೂಲಕ ಮಂಡ್ಯದಲ್ಲಿ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿರುವಂತೆ ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ರಾಜ್ಯ ಸರಕಾರ ಹನುಮ ಧ್ವಜ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಈ ಸರ್ಕಾರ ಹನುಮ ಧ್ವಜ ತೆರವುಗೊಳಿಸುವ ಮೂಲಕ ಅವರ ಓಲೈಕೆಗೆ ಮುಂದಾದ ಹಾಗೆ ಕಾಣಿಸುತ್ತಿದೆ.
ಸರ್ಕಾರದ ಈ ಹಿಂದೂ ವಿರೋಧಿ ನಡೆಯನ್ನು ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸಿ, ಕೇಸುಗಳನ್ನು ದಾಖಲಿಸಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ದುಸ್ಸಾಹಸಕ್ಕೆ ಕೈಹಾಕಿದೆ.ಸಿದ್ದರಾಮಯ್ಯ ಸರ್ಕಾರ ಹಿಂದೂ ಸಮಾಜವನ್ನು ದ್ವಿತೀಯ ದರ್ಜೆ ನಾಗರಿಕರಂತೆ ನೋಡುತ್ತಿದೆ. ಹನುಮ ಧ್ವಜ ತೆರವುಗೊಳಿಸುವ, ಮಂಡ್ಯದ ಕೆರೆಗೊಡಿನ ಘಟನೆ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಸಮಸ್ತ ಹಿಂದೂ ಸಮಾಜ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಿಟ್ಟ ಉತ್ತರ ನೀಡುವ ಸಂಕಲ್ಪ ಮಾಡಲಿದೆ. ತಕ್ಷಣ ಸರ್ಕಾರ ಹನುಮ ದ್ವಜವನ್ನ ಹಾರಿಸಲು ಅನುಮತಿ ನೀಡದಿದ್ದಲ್ಲಿ “ಮಂಡ್ಯ ಚಲೋ” ಕರೆ ನೀಡಲಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಹಿಂದೂಗಳು ಹನುಮ ದ್ವಜ ಹಿಡಿದು ಮಂಡ್ಯ ಜಿಲ್ಲೆಗೆ ಕಾಲಿಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ರಾಜ್ಯದ ಪ್ರತಿಯೊಬ್ಬ ಹಿಂದುವೂ ತಮ್ಮ ತಮ್ಮ ಮನೆಗಳ ಮೇಲೆ ಹನುಮ ದ್ವಜ ಹಾರಿಸಿ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist