ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯೆಯೇ ಹೃದಯಾಘಾತದಿಂದ ಮೃತ್ಯು!
ಉಡುಪಿ : ದೇಶಾದ್ಯಂತ ಹೃದಯಾಘಾತ (Heart Attack) ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ (Udupi District Hospital) ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ (Dr Shashikala) ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.
ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು.
ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.
ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾಕ್ಟರ್‌ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.
Road Accident : ಲಾರಿ ಓವರ್ ಟೇಕ್ ಮಾಡಲು ಹೋಗಿ ಸಾವಿನ ಮನೆ ಸೇರಿದ ನಾಲ್ವರು! ಮತ್ತೊಬ್ಬ ಗಂಭೀರ
ರಾಯಚೂರು: ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಟಾಟಾಯೆಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ರಾಯಚೂರು ಜಿಲ್ಲೆ ಸಿಂಧನೂರು ತಾ.ಪಗಡದಿನ್ನಿ ಕ್ಯಾಂಪ್ ಬಳಿ ಘಟನೆ ನಡೆದಿದೆ.
ಇಸ್ಮಾಯಿಲ್(25), ಚನ್ನಬಸವ (26), ಅಂಬರೀಶ್ (20), ರವಿ( 21) ಮೃತ ದುರ್ದೈವಿಗಳು. ಮದುವೆ ಸಮಾರಂಭಕ್ಕಾಗಿ ಶಾಮಿಯಾನ ಲೋಡ್‌ನೊಂದಿಗೆ ಡೆಕೋರೆಷನ್ ಮಾಡಲು ಹೊರಟ್ಟಿದ್ದರು. ಈ ವೇಳೆ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಯುವಕ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.