ಉಡುಪಿ : ಎರಡು ಬೈಕುಗಳು ಪರಸ್ಪರ ಢಿಕ್ಕಿ ಓರ್ವ ಸಾವು…!!
ಉಡುಪಿ : ಎರಡು ಬೈಕುಗಳು ಪರಸ್ಪರ ಢಿಕ್ಕಿ ಹೊಡೆದು ಕೊಂಡು ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ರಾ.ಹೆ. 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಸಂಭವಿಸಿದೆ.
ಸಹಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್ ವರ್ಕ್ಸ್ ಕಾರ್ಮಿಕ ಮಲ್ಲೇಶ್ (53) ಮೃತಪಟ್ಟಿದ್ದು, ಬೈಕ್ ಸವಾರ ಜಯನ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ಮತ್ತು ಉಳಿಯಾರಗೋಳಿ ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಹೋಂಡಾ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಕೊಂಡಿದೆ.
ಅಪಘಾತದ ರಭಸಕ್ಕೆ ಸಹ ಸವಾರನಾಗಿದ್ದ ಮಲ್ಲೇಶ್ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆಗೆ ತೀವ್ರ ಗಾಯಗಳುಂಟಾಗಿತ್ತು. ಸವಾರ ಜಯನ್ ಕಾಲು ಮುರಿತಕ್ಕೊಳಗಾಗಿದ್ದು ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಮಲ್ಲೇಶ್ ಮೃತಪಟ್ಟಿದ್ದಾರೆ. ಪಲ್ಸರ್ ಬೈಕ್ ಸವಾರ ಶ್ರೀನಿವಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರ್ಕಳ ಹೆಬ್ರಿಯಲ್ಲಿ ಸರಕಾರಿ ಬಸ್‌ಗೆ ಕಾರು ಡಿಕ್ಕಿ, ಮಹಿಳೆ ಮೃತ್ಯು..!
ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ.
ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಇನೋವಾ ಕಾರು ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಹಿಂದಿಕ್ಕುವಾಗ ರಿಕ್ಷಾದ ಬಲಬಾಗಕ್ಕೆ ಡಿಕ್ಕಿ ಹೊಡೆದು ತನ್ನ ಎದುರಿನಿಂದ ಬರುತ್ತಿದ್ದ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಂತಮ್ಮ (77) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.