ಮಂಗಳವಾರ, ಡಿಸೆಂಬರ್ 5, 2023
ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ-ಮುಂಬೈ ದಾಳಿಯ ಉಗ್ರನಿಗೆ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಜಿರೆ : ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಮೃತದೇಹ ಪ್ರಕರಣಕ್ಕೆ ಟ್ವಿಸ್ಟ್ ; ಅಕ್ರಮ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ!

Twitter
Facebook
LinkedIn
WhatsApp
ಉಜಿರೆ : ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಮೃತದೇಹ ಪ್ರಕರಣಕ್ಕೆ ಟ್ವಿಸ್ಟ್ ; ಅಕ್ರಮ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ!

ಬೆಳ್ತಂಗಡಿ : ಬೆಳ್ತಂಗಡಿಯ ಉಜಿರೆಯ ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ ಹೆಂಡತಿಯನ್ನೇ ಗಂಡ ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದ್ದು ಆರೋಪಿ ಸುಧಾಕರನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಾಲ ಗ್ರಾಮದಲ್ಲಿ ಈ ಪ್ರಕೃಣ ನಡೆದಿದ್ದು ಶುಕ್ರವಾರ ವಿವಾಹಿತ ಮಹಿಳೆ ಶಶಿಕಲರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣವೆಂದು ಭಾವಿಸಲಾಗಿತ್ತು. ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಸ್ಥಳೀಯರು ಹೇಳಿದ್ದರು. ಆದರೆ, ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹವನ್ನು ಹೊರತೆಗೆದು ಪರಿಶೀಲನೆ ಮಾಡಿದ್ದರು.

ನಂತರ ಸಾವಿಗೆ ಕಾರಣವೇನೆಂದು ತನಿಖೆ ಮಾಡಿದಾಗ ಗಂಡನೇ ತನ್ನ ಹೆಂಡತಿಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂಬುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಮದುವೆಯಾಗಿ ಮಕ್ಕಳಿದ್ದರೂ ತನ್ನ ಗಂಡ ಬೇರೊಂದು ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿ ಶಶಿಕಲ ಮೇಲೆ ಆರೋಪಿ ಗಂಡ ಸುಧಾಕರ ಹಲ್ಲೆ ಮಾಡಿ, ನಂತರ ಬಾವಿಗೆ ತಳ್ಳಿದ್ದ ಎಂಬುದು ಇದೀಗ ತನಿಖೆಯಿಂದ ಬಯಲಾಗಿದೆ. ಆರೋಪಿ ಸುಧಾಕರನನ್ನು ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಸುಧಾಕರ್‌ ಹಾಗೂ ಶಶಿಕಲಾ ಕಳೆದ 7 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿದ್ದರು. ಮೊದಲು ಮನೆಯವರ ವಿರೋಧವಿದ್ದರೂ, ಅವರನ್ನು ಒಪ್ಪಿಸಿ ಮದುವೆಯೂ ಆಗಿದ್ದರು. ಆರಂಭದಲ್ಲಿ ಸುಖವಾಗಿ ಸಂಸಾರ ಮಾಡಿಕೊಂಡಿದ್ದ ದಂಪತಿಗೆ ಒಂದು ವರ್ಷದಲ್ಲಿಯೇ ಹೆಣ್ಣು ಮಗು ಜನಿಸಿತ್ತು. ಆದರೆ, ಕಳೆದೊಂದು ವರ್ಷದಿಂದ ಗಂಡನಿಗೆ ಮತ್ತೆ ಯುವತಿಯರ ಶೋಕಿ ಶುರುವಾಗಿತ್ತು. ಹೀಗಾಗಿ, ಮದುವೆಯಾಗಿ ಮನೆಯಲ್ಲಿ ಮಡದಿ ಹಾಗೀ 6 ವರ್ಷದ ಮಗಳಿದ್ದರೂ ಬೇರೊಂದು ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು ಇದೇ ಕಾರಣಕ್ಕೆ ಆಗಾಗ ಇಬ್ಬರ ಮಧ್ಯೆ ಜಗಳವೂ ಆಗುತ್ತಿತ್ತು. ಶುಕ್ರವಾರವೂ ಮನೆಯಲ್ಲಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. 

 ಆಗ ಗಂಡ ಕುತ್ತಿಗೆ ಹಿಸುಕಿ ಕೊಲೆಗೈದಿದ್ದಾನೆ. ಆದರೆ, ಆಕೆ ಸಾವನ್ನಪ್ಪದೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಗ ತನ್ನ ಹೆಂಡತಿಯದ್ದು ಆತ್ಮಹತ್ಯೆ ಎಂದು ಬಿಂಬಿಸುವ ದೃಷ್ಟಿಯಿಂದ ಪ್ರಜ್ಞೆ ತಪ್ಪಿದ್ದ ಹೆಂಡತಿಯನ್ನು ಎತ್ತಿಕೊಂಡು ಹೋಗಿ ಮನೆಯ ಬಳಿಯ ಬಾವಿಗೆ ತಳ್ಳಿದ್ದಾನೆ.ನಂತರ ಕೊಲೆ ಆರೋಪ ತನ್ನ ಮೇಲೆ ಬರಬಾರದೆಂದು ಸ್ಥಳದಿಂದ ಪರಾರಿ ಆಗಿದ್ದರೂ ಬಳಿಕ ಪೊಲೀಸರು ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ