ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ : ಕಾಫಿಡೇ ಸಿದ್ದಾರ್ಥ್ ಬಳಿಕ ಮತ್ತೊರ್ವ ಉದ್ಯಮಿ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ!

Twitter
Facebook
LinkedIn
WhatsApp
ಉಳ್ಳಾಲ : ಕಾಫಿಡೇ ಸಿದ್ದಾರ್ಥ್ ಬಳಿಕ ಮತ್ತೊರ್ವ ಉದ್ಯಮಿ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ!

ಮಂಗಳೂರು (ಅ.30): ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸವಿಗೆ ಶರಣಾಗಿದ್ದಾನೆ.

ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗ ತಂತಿ ಬೇಲಿ ನಿರ್ಮಾಣ ಮಾಡಿದ ನಂತರ  ಮೂರು ವರ್ಷಗಳ ಬಳಿಕ ಮತ್ತೆ ನೇತ್ರಾವತಿ ಸೇತುವೆ ಆತ್ಮಹತ್ಯೆ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ‌ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಮೂರು ವರ್ಷಗಳ ಬಳಿಕ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. 

 

2019ರಲ್ಲಿ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆ ನಂತರ ಈ ಸೇತುವೆಯಲ್ಲಿ ಸರಣಿ ಆತ್ಮಹತ್ಯೆಗಳಾಗಿತ್ತು. ಹೀಗಾಗಿ 2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತಡೆಬೇಲಿಯನ್ನು ಅಳವಡಿಸಿತ್ತು. 2020ರ ನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿದ್ದವು. ಆದರೆ, ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆತ್ಮಹತ್ಯೆ ಮೂಲಕ ನೇತ್ರಾವತಿ ಸೇತುವೆ ಸುದ್ದಿಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ