ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ : ಮದುವೆ ವೇಳೆ ತಾಳಿ ಕಟ್ಟುವಾಗ ಪೊಲೀಸರೊಂದಿಗೆ ಮಾಜಿ ಪ್ರೇಯಸಿ ಎಂಟ್ರಿ; ಮದುವೆ ಮಂಟಪದಲ್ಲಿ ಆಗಿದ್ದೇನು?

Twitter
Facebook
LinkedIn
WhatsApp
ಉಳ್ಳಾಲ : ಮದುವೆ ವೇಳೆ ತಾಳಿ ಕಟ್ಟುವಾಗ ಪೊಲೀಸರೊಂದಿಗೆ ಮಾಜಿ ಪ್ರೇಯಸಿ ಎಂಟ್ರಿ; ಮದುವೆ ಮಂಟಪದಲ್ಲಿ ಆಗಿದ್ದೇನು?

ಮಂಗಳೂರು: ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.

ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಎಂಬಾತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

 

ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.

 

ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ