ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಿಗ್ಗಾಮುಗ್ಗಾ ತರಾಟೆ ...!
ಧಾರವಾಡ ಶಹರ ಠಾಣೆ ಇನ್ಸ್‌ಪೆಕ್ಟರ್ ಎನ್.ಸಿ. ಕಾಡದೇವರಮಠ ಅವರನ್ನು ಮನೆಗೆ ಕರೆಸಿದ್ದ ಕೇಂದ್ರ ಸಚಿವರು, ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ದಬ್ಬಾಳಿಕೆ ಮಾಡಿದ್ದೀರಿ, ನಾವೂ ಅಧಿಕಾರಕ್ಕೆ ಬರುತ್ತೇವೆ, ಎಚ್ಚರಿಕೆಯಿಂದ ಇರಿ ಎಂದು ಚಳಿ ಬಿಡಿಸಿದ್ದಾರೆ.
ಬಿ.ವೈ. ವಿಜಯೇಂದ್ರ 3 ವರ್ಷಕ್ಕೆ ಅಧ್ಯಕ್ಷ, ನಂತರ ಮತ್ತೊಬ್ಬರು ಎಂದ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ (BJP State President) ಬಿ.ವೈ. ವಿಜಯೇಂದ್ರ (BY Vijayendra) ಅವರನ್ನು ಆಯ್ಕೆ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರ ಅತ್ಯಂತ ಸೂಕ್ತವಾಗಿದೆ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದಲ್ಲಿ ನಾವು ಪಕ್ಷವನ್ನು ಗಟ್ಟಿಗೊಳಿಸುತ್ತೇವೆ. ಬಿ.ವೈ. ವಿಜಯೇಂದ್ರ ಮೂರು ವರ್ಷ ಮಾತ್ರ ಅಧ್ಯಕ್ಷರಾಗಿರುತ್ತಾರೆ. ನಂತರ ಮತ್ತೊಬ್ಬ ಕಾರ್ಯಕರ್ತ ಅಧ್ಯಕ್ಷರಾಗುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಲ್ಹಾದ್ ಜೋಶಿ, ಬಿ.ಎಸ್. ಯಡಿಯೂರಪ್ಪ ಒಂದು ಜಾತಿ, ಸಮುದಾಯಕ್ಕೆ ಸೀಮಿತರಾದ ನಾಯಕರಲ್ಲ. ಯಡಿಯೂರಪ್ಪ ಪಕ್ಷಾತೀತ ನಾಯಕ. ಎಲ್ಲ ಸಮುದಾಯದವರೂ ಅವರಿಗೆ ಬೆಂಬಲ ಕೊಡುತ್ತಿದ್ದಾರೆ. ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದು ಸ್ಪಷ್ಟಪಡಿಸಿದರು.