ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

UP: ಆಸ್ಪತ್ರೆಯಲ್ಲಿ ಸಿಗದ ಎಮರ್ಜೆನ್ಸಿ ಬೆಡ್ ; ಬಿಜೆಪಿ ಮಾಜಿ ಸಂಸದನ ಪುತ್ರ ಸಾವು!

Twitter
Facebook
LinkedIn
WhatsApp
UP: ಆಸ್ಪತ್ರೆಯಲ್ಲಿ ಸಿಗದ ಎಮರ್ಜೆನ್ಸಿ ಬೆಡ್ ; ಬಿಜೆಪಿ ಮಾಜಿ ಸಂಸದನ ಪುತ್ರ ಸಾವು!

ಲಕ್ನೋ: ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ (BJP Former MP) ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ (BJP) ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ (Bhairon Prasad Mishra) ಪುತ್ರ.

ಮೂತ್ರಪಿಂಡದ (Kidney) ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಪ್ರಸಾದ್ ಮಿಶ್ರಾ ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್‍ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ (Mukesh Ambani) ಅವರಿಗೆ 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಮತ್ತೊಂದು ಬೆದರಿಕೆ ಪತ್ರ ಬಂದಿದ್ದು, ಬೇಡಿಕೆ ಮೊತ್ತವನ್ನು 200 ಕೋಟಿ ರೂ.ನಿಂದ 400 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.

ಇದೇ ಅಕ್ಟೋಬರ್‌ 27 ರಂದು 200 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟು ಬೆದರಿಕೆ ಇಮೇಲ್‌ ಪತ್ರ (Email Death Threat Letter) ಕಳುಹಿಸಿದ್ದ ಅದೇ ಇಮೇಲ್‌ನಿಂದ ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಈ ಬಾರಿ ಬೇಡಿಕೆ ಮೊತ್ತವನ್ನು 400 ಕೋಟಿಗೆ ಹೆಚ್ಚಿಸಲಾಗಿದೆ.

ನಿಮಗೆ ಎಷ್ಟೇ ಉತ್ತಮ ಭದ್ರತೆ ಇದ್ದರೂ, ನಮ್ಮ ಒಬ್ಬನೇ ಒಬ್ಬ ಸ್ನೈಪರ್‌ ನಿಮ್ಮನ್ನು ಕೊಲ್ಲುತ್ತಾನೆ. ಈ ಬಾರಿ ನಮ್ಮಮ್ಮ ಪತ್ತೆ ಮಾಡುವುದಕ್ಕಾಗಲಿ ಅಥವಾ ಬಂಧಿಸುವುದಕ್ಕಾಗಲಿ ಸಾಧ್ಯವಿಲ್ಲ ಎಂದೂ ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಎಚ್ಚರಿಕೆ ನೀಡಿದ್ದಾನೆ. 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು (Mumbai Police) ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ.

ಇದೇ ತಿಂಗಳ ಅಕ್ಟೋಬರ್‌ 27 ರಂದು ಮೊದಲ ಇಮೇಲ್‌ ಬೆದರಿಕೆ ಪತ್ರ ಬಂದಿತ್ತು. ಅದರಲ್ಲಿ 20 ಕೋಟಿ ರೂ.ಗಳನ್ನು ತಪ್ಪದೇ ಕೊಡಬೇಕು. ನಮ್ಮ ಬಳಿ ಶಾರ್ಪ್ ಶೂಟರ್‌ಗಳಿದ್ದು, ಹಣ ನೀಡುವಲ್ಲಿ ವಿಫಲರಾದರೆ ಗುಂಡು ಹಾರಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು. ಅಕ್ಟೋಬರ್‌ 28 ರಂದು ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಮತ್ತೊಂದು ಬೆದರಿಕೆ ಪತ್ರ ಕಳುಹಿಸಿದ್ದ. ಹಿಂದಿನ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದ ಕಾರಣ ಹಣದ ಬೇಡಿಕೆಯನ್ನು 200 ಕೋಟಿ ರೂ.ಗೆ ಹೆಚ್ಚಿಸಿರುವುದಾಗಿ ಎಚ್ಚರಿಕೆ ನೀಡಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ