ಭಾರತ-ಪಾಕ್ ಪಂದ್ಯದ ವೇಳೆ 24 ಕ್ಯಾರೆಟ್ ಚಿನ್ನದ ಐಫೋನ್ ಕಳೆದುಕೊಂಡ ಊರ್ವಶಿ!

ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಅ.14ರಂದು ನಡೆದ ಭಾರತ- ಪಾಕಿಸ್ತಾನ ಕ್ರಿಕೆಟ್ ಪಂದ್ಯಾವಳಿ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ, ಐರಾವತ ನಟಿ ಊರ್ವಶಿ ರೌಟೇಲಾ ಕೂಡ ಬಂದಿದ್ದರು. ಪಂದ್ಯ ನೋಡುವಾಗ ಅವರು ಅತ್ಯಂತ ದುಬಾರಿ ಚಿನ್ನದ ಐಫೋನ್ ಕಳೆದುಕೊಂಡಿರೋದಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ.

ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ ಎಂದು ಊರ್ವಶಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.

ನಟಿ ಊರ್ವಶಿ ಇದೀಗ ಶೇರ್ ಮಾಡಿರುವ ಪೋಸ್ಟ್ ಕೂಡ ಸಖತ್ ಟ್ರೋಲ್ ಆಗುತ್ತಿದೆ. ಸುದ್ದಿಯಾಗಲು ಸದಾ ಒಂದಲ್ಲಾ ಒಂದು ಗಿಮಿಕ್ ಮಾಡುತ್ತಿರುತ್ತಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರುತ್ತಿದ್ದಾರೆ. ಐಫೋನ್ ಕಳೆದುಕೊಂಡಿದ್ದಾರೆ ಎಂಬ ವಿಚಾರವೇ ಸುಳ್ಳು ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿಯ ಬಗ್ಗೆ ಪರ ವಿರೋಧದ ಚರ್ಚೆ ಕೂಡ ನಡೆಯುತ್ತಿದೆ.

ಚಡ್ಡಿ ಚಿಕ್ಕಿ ಸೋನು ಗೌಡ: ಏನ್ ಹಾವಳಿ ಗುರು ಎಂದಿದ್ದಾರೆ ಫ್ಯಾನ್ಸ್
ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಹಾಟ್ (Hot) ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದ ಸೋನು, ಈ ಬಾರಿ ಕೆಂಪು ಚಡ್ಡಿ, ಬಿಳಿ ಟಿ ಶರ್ಟ್ ನಲ್ಲಿ ಮತ್ತೆ ಪಡ್ಡೆಗಳ ಹೃದಯಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಸೋನು ಗೌಡ (Sonu Srinivas Gowda) ಒಂದರ ಮೇಲೊಂದು ಫೋಟೋಗಳನ್ನು ಶೇರ್ ಮಾಡುತ್ತಲೇ ಇದ್ದಾರೆ. ಆ ಫೋಟೋಗಳು ಕೂಡ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ನೆಗೆಟಿವ್ ಕಾಮೆಂಟ್ ಗಳ ಮಹಾಪುರವೇ ಹರಿದು ಬರುತ್ತಿವೆ. ಇಂತಹ ಕಾಮೆಂಟ್ ಗಳಿಗೆ ಉತ್ತರ ಕೊಡುವಂತೆ ಮತ್ತೊಂದು ಫೋಟೋ ಈ ಹಿಂದೆ ಶೇರ್ ಮಾಡಿದ್ದರು. ಆ ಫೋಟೋದಲ್ಲಿ ಅವರು ಹಳದಿ ಸೀರೆ ತೊಟ್ಟಿದ್ದರು.

ಈ ಹಿಂದೆಯೂ ಅವರು ಮಾಲ್ಡೀವ್ಸ್ (Maldives) ವೆಕೇಷನ್ ಎಂಜಾಯ್ ಮಾಡಿದ್ದರು. ಆ ವಿವರವನ್ನು ಫೋಟೋಗಳ ಮೂಲಕ ಹಂಚಿಕೊಂಡಿದ್ದರು. ಒಳ ಉಡುಪಿನ ಫೋಟೋ ಶೇರ್ ಮಾಡಿ ವಿಚಿತ್ರ ಪೋಸ್ ಕೊಟ್ಟಿದ್ದ ನಟಿ ಬಿಕಿನಿ ಫೋಟೋ ಕೂಡ ಶೇರ್ ಮಾಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು.
ಕಪ್ಪು ಬಣ್ಣದ ಬಿಕಿನಿ ಧರಿಸಿ ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದರು. ವಿವಿಧ ಭಂಗಿಗಳ ಫೋಟೋಗಳನ್ನ ನಟಿ ಶೇರ್ ಮಾಡಿದ್ದರು. ಸೋನು ಅವತಾರಕ್ಕೆ ಒಂದಿಷ್ಟು ಜನ ಮೆಚ್ಚುಗೆ ಸೂಚಿಸಿದ್ರೆ, ಮತ್ತೊಂದಿಷ್ಟು ಜನ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದರು.
ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.