ರಾಯ್ಪುರ: ವಾಹನ ಚಲಾಯಿಸುವಾಗ ಫೋನ್ ಬಳಕೆ ಮಾಡಬಾರದು ಎಂಬ ಅರಿವಿದ್ದರೂ ಇಲ್ಲೊಬ್ಬ ಚಾಲಕ ಫೋನ್ ನಲ್ಲಿ ಮಾತನಾಡುತ್ತಾ ಬಸ್ ಓಡಿಸಿದ್ದಾನೆ. ಪರಿಣಾಮ 26 ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಈ ಘಟನೆ ಛತ್ತೀಸ್‍ಗಢ (Chhattisgarh) ದ ಘರ್ಘೋಡಾ (Gharghoda Area) ಪ್ರದೇಶದಲ್ಲಿ ನಡೆದಿದೆ. ಚಾಲಕ ಫೋನಿನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರೈಲ್ವೇ ಬ್ರಿಡ್ಜ್ (Railway Bridge) ಗೆ ಗುದ್ದಿದೆ. ಪರಿಣಾಮ 26 ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.