ವೈಷ್ಣೋದೇವಿ ದರ್ಶನಕ್ಕೆ ಬರುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು 10 ಪ್ರಯಾಣಿಕರು ದುರ್ಮರಣ

ಶ್ರೀನಗರ: ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವಿಗೀಡಾದ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ (ಮೇ.30 ರಂದು) ನಡೆದಿದೆ.
ಅಮೃತಸರದಿಂದ ಮಾತಾ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆ ತರುತ್ತಿದ್ದ ಬಸ್ ಜಜ್ಜರ್ ಕೋಟ್ಲಿ ಬಳಿ ಸೇತುವೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ10 ಮಂದಿ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಒಟ್ಟು 75 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಗಾಯಗೊಂಡವರನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿಯೊಂದು ಕಮರಿಗೆ ಬಿದ್ದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಪಿಟಿಐ ವರದಿಯ ಪ್ರಕಾರ, ಅಪಘಾತದಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ.
ಇನ್ನು ಸೋಮವಾರ ಮೈಸೂರಿನ ಟಿ.ನರಸೀಪುರದಲ್ಲಿ ಬಸ್ -ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 10 ಮಂದಿ ಮೃತಪಟ್ಟ ಭೀಕರ ಘಟನೆ ನಡೆದಿತ್ತು.
J&K | 10 people died after a bus going from Amritsar to Katra fell into a deep gorge. The injured have been shifted to hospital: Jammu DC
— ANI (@ANI) May 30, 2023