ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈಷ್ಣೋದೇವಿ ದರ್ಶನಕ್ಕೆ ಬರುತ್ತಿದ್ದ ಬಸ್‌ ಕಂದಕಕ್ಕೆ ಉರುಳಿ ಬಿದ್ದು 10 ಪ್ರಯಾಣಿಕರು ದುರ್ಮರಣ

Twitter
Facebook
LinkedIn
WhatsApp
ವೈಷ್ಣೋದೇವಿ ದರ್ಶನಕ್ಕೆ ಬರುತ್ತಿದ್ದ ಬಸ್‌ ಕಂದಕಕ್ಕೆ ಉರುಳಿ ಬಿದ್ದು 10 ಪ್ರಯಾಣಿಕರು ದುರ್ಮರಣ

ಶ್ರೀನಗರ: ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವಿಗೀಡಾದ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ (ಮೇ.30 ರಂದು) ನಡೆದಿದೆ.

ಅಮೃತಸರದಿಂದ ಮಾತಾ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆ ತರುತ್ತಿದ್ದ ಬಸ್‌ ಜಜ್ಜರ್ ಕೋಟ್ಲಿ ಬಳಿ ಸೇತುವೆಯಿಂದ ಸ್ಕಿಡ್‌ ಆಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ10 ಮಂದಿ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಒಟ್ಟು 75 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಗಾಯಗೊಂಡವರನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೋಮವಾರ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿಯೊಂದು ಕಮರಿಗೆ ಬಿದ್ದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಪಿಟಿಐ ವರದಿಯ ಪ್ರಕಾರ, ಅಪಘಾತದಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ.

ಇನ್ನು ಸೋಮವಾರ ಮೈಸೂರಿನ ಟಿ.ನರಸೀಪುರದಲ್ಲಿ ಬಸ್‌ -ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 10 ಮಂದಿ ಮೃತಪಟ್ಟ ಭೀಕರ ಘಟನೆ ನಡೆದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ