ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಗ್ ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್ ; ತಡರಾತ್ರಿ ಬಂಧಿಸಿದ ಪೊಲೀಸರು?

Twitter
Facebook
LinkedIn
WhatsApp
ಬಿಗ್ ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್ ; ತಡರಾತ್ರಿ ಬಂಧಿಸಿದ ಪೊಲೀಸರು?

‘ಕನ್ನಡ ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆ ಒಳಗೆ ಪೊಲೀಸರ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ. ವರ್ತೂರು ಸಂತೋಷ್ ಅವರನ್ನು ಪೊಲೀಸರು ಭಾನುವಾರ (ಅಕ್ಟೋಬರ್ 22) ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಅವರು ಮಾಡಿದ ತಪ್ಪೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್​ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ  ಚೈನ್ ಹಾಕಿದ್ದರು. ಈ ಪೆಂಡೆಂಟ್ ಚರ್ಚೆ ಹುಟ್ಟುಹಾಕಿತ್ತು. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ನೀಡುವುದಿಲ್ಲ. ಈಗ ವರ್ತೂರು ಸಂತೋಷ್ ಅವರು ಅರೆಸ್ಟ್​ ಆಗಿರುವುದರಿಂದ ಅವರಿಗೆ ಮತ್ತೆ ಬಿಗ್ ಬಾಸ್ ಮನೆ ಒಳಗೆ ಬರೋಕೆ ಅವಕಾಶ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಎಲಿಮಿನೇಟ್ ಆದ ಲೆಕ್ಕವೇ ಎಂದು ಕೆಲವರು ಊಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ