ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅನಾರೋಗ್ಯದಿಂದ ಚೇತರಿಸಿಕೊಂಡು ಪದ್ಮರಾಜ ರಾಮಯ್ಯ ಅವರೊಂದಿಗೆ ಹೆಜ್ಜೆ ಹಾಕಿದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ

Twitter
Facebook
LinkedIn
WhatsApp
ಅನಾರೋಗ್ಯದಿಂದ ಚೇತರಿಸಿಕೊಂಡು ಪದ್ಮರಾಜ ರಾಮಯ್ಯ ಅವರೊಂದಿಗೆ ಹೆಜ್ಜೆ ಹಾಕಿದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ

ಅನಾರೋಗ್ಯದಿಂದ ಬೆಂಗಳೂರಿನಲ್ಲಿ ವಿಶ್ರಾಂತಿಯಲ್ಲಿದ್ದ ಮಾಜಿ ಶಾಸಕರು ವಸಂತ ಬಂಗೇರರವರು ಸಂಪೂರ್ಣ ಚೇತರಿಸಿಕೊಂಡು ಚುನಾವಣಾ ಪ್ರಚಾರಕ್ಕೆ ಸಜ್ಜಗಿದ್ದಾರೆ.. ನಿನ್ನೆ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ರವರ ಜೊತೆ ಭರವಸೆಯ ಹೆಜ್ಜೆ ಹಾಕಿದರು.

ಇತ್ತೀಚಿಗೆ ಅನಾರೋಗ್ಯದಿಂದ ವಿಶ್ರಾಂತಿ ಪಡೆಯುತ್ತಿದ್ದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರು ಪದ್ಮರಾಜ್ ರಾಮಯ್ಯ ಅವರೊಂದಿಗೆ ಜೊತೆಯಾಗಿ ಹೆಜ್ಜೆ ಹಾಕುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಈ ಬಾರಿ ಪದ್ಮರಾಜ್ ರಾಮಯ್ಯ ಅವರನ್ನು ಗೆಲ್ಲಿಸಿಕೊಡಬೇಕೆಂಬ ಆಸೆಯನ್ನು ತಮ್ಮ ಆಪ್ತರೊಂದಿಗೆ ವಸಂತ ಬಂಗೇರರು ವ್ಯಕ್ತಪಡಿಸಿದರೆಂದು ತಿಳಿದುಬಂದಿದೆ.

ಸತತವಾಗಿ ಬಿಜೆಪಿಯ ತೆಕ್ಕೆಯಲ್ಲಿ ಉಳಿದ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರವು ಈ ಬಾರಿ ಪದ್ಮರಾಜ್ ರಾಮಯ್ಯ ಅವರ ಸ್ಪರ್ಧೆಯಿಂದ ಬಿಜೆಪಿಗೆ ಅತ್ಯಂತ ಕಠಿಣವಾಗಿ ಪರಿಣಮಿಸಿದೆ. ಆದರೂ ಅದೇ ಹುಮ್ಮಸ್ಸಿನೊಂದಿಗೆ ಕ್ಯಾಪ್ಟನ್ ಬ್ರಿಜೆಸ್ ಚೌಟ ಅವರನ್ನು ಗೆಲ್ಲಿಸಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ಗೆ ಅದ್ಧೂರಿ ಸ್ವಾಗತ; ಸ್ಮಾರಕಗಳಿಗೆ ಭೇಟಿ

ಮಂಗಳೂರು: ಬೆಂಗಳೂರಿನಿಂದ ಶುಕ್ರವಾರ ಮಂಗಳೂರಿಗೆ ವಾಪಸಾದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.

ವಿಮಾನ ನಿಲ್ದಾಣದಲ್ಲಿ ಅವರನ್ನು ಬರಮಾಡಿಕೊಂಡ ನೂರಾರು ಮಂದಿ ಹಾರ ಹಾಕಿ ಚೆಂಡೆ ಹಾಗೂ ವಾದ್ಯಮೇಳದ ಹಿನ್ನೆಲೆಯಲ್ಲಿ ಮೆರವಣಿಗೆ ಮಾಡಿದರು.

ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪದ್ಮರಾಜ್‌ ಅವರು ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ನಂತರ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಪುರಭವನದಲ್ಲಿ ಬಿ.ಆರ್.ಅಂಬೇಡ್ಕರ್ ಪ್ರತಿಮೆಗೂ ಗೌರವ ಸಲ್ಲಿಸಿದರು.

ಬಾವುಟಗುಡ್ಡಕ್ಕೆ ತೆರಳಿದ ಅವರು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ನಮನ ಸಲ್ಲಿಸಿ, ಟಾಗೋರ್ ಪಾರ್ಕ್‌ನಲ್ಲಿ ರವೀಂದ್ರನಾಥ ಟಾಗೋರ್ ಪ್ರತಿಮೆಗೆ ಗೌರವ ಸಲ್ಲಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ತುಳುನಾಡಿನ ಸಮಗ್ರ ಅಭಿವೃದ್ಧಿ ಮಾಡುವುದರೊಂದಿಗೆ ಸೌಹಾರ್ದ ಪರಂಪರೆ ಮರಳಿಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ ಮರುಕಳಿಸುವಂತೆ ಮಾಡುವುದು ತಮ್ಮ ಉದ್ದೇಶ ಎಂದರು.

ಮಂಗಳೂರು ಮಹಾನಗರಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ ಚಂದ್ರ ಆಳ್ವ ಇದ್ದರು.

ಬಂಟ್ವಾಳದಲ್ಲಿ ಸಭೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಮೂರು ದಶಕಗಳಿಂದ ಜಿಲ್ಲೆಯಲ್ಲಿ ಉತ್ತಮ ಯೋಜನೆಗಳು ಜಾರಿಯಾಗಲಿಲ್ಲ ಎಂದು ದೂರಿದರು.

ಮುಖಂಡರಾದ ರಮಾನಾಥ್ ರೈ, ಎಂ.ಎಸ್ ಮೊಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸುದರ್ಶನ್ ಜೈನ್, ಅಶ್ವಿನ್ ಕುಮಾರ್ ರೈ, ಯೂಸೆಲ್ ರಾಡ್ರಿಗಸ್, ಸುಭಾಷ್‌ ಚಂದ್ರ ಶೆಟ್ಟಿ, ಜಯಂತಿ ವಿ.ಪೂಜಾರಿ, ಸುಧೀರ್ ಕುಮಾರ್ ಶೆಟ್ಟಿ, ಇಬ್ರಾಹಿಂ ನವಾಜ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ