Vedio: ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 4 ಸಾವು, ಹಲವರಿಗೆ ಗಾಯ
ಲಕ್ನೋ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ (ಫೆ.25 ರಂದು) ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.
“ಭಾರ್ವಾರಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. 5-6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಾಲೀಕರು ಪಟಾಕಿ ತಯಾರಿಸಲು ಮತ್ತು ಮಾರಾಟ ಮಾಡಲು ಪರವಾನಗಿ ಹೊಂದಿದ್ದರು ಎಂದು ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಪಿ) ಬ್ರಿಜೇಶ್ ಶ್ರೀವಾಸ್ತವ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದರು ಮತ್ತು 170 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
At least 4 killed & many several sustained burn injuries following blast in fire cracker factory in Khalilabad area of Bharwari Nagar under Kokhraj police limits of #Kaushambi district, #UttarPradesh pic.twitter.com/E0VbsdMXeE
— Arvind Chauhan 💮🛡️ (@Arv_Ind_Chauhan) February 25, 2024