ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್!

Twitter
Facebook
LinkedIn
WhatsApp
Vicky and team's reels

ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು ಮಾಡಿ ನಕ್ಕು ನಗಿಸುವ ಈ ತಂಡ ಇದೀಗ ಅಕಾಯ್​ ಹೆಸರಿನ ಅರ್ಥದ ಕುರಿತು ರೀಲ್ಸ್ ಮಾಡಿದ್ದು, ಅದನ್ನು ನೋಡಿದವರು ಬಿದ್ದೂ ಬಿದ್ದೂ ನಗುತ್ತಿದ್ದಾರೆ.

ಇದರಲ್ಲಿ ವಿಕ್ಕಿ ಅನುಷ್ಕಾ ಆಗಿದ್ದಾರೆ. ಅವರು ಗಂಡ ವಿರಾಟ್ ಕೊಹ್ಲಿ ಪಾತ್ರಧಾರಿಯ ಜೊತೆ ಗುರುಗಳ ಬಳಿ ಹೋಗಿದ್ದಾರೆ. ಅಲ್ಲಿ ಒಂದಿಷ್ಟು ಮಾತುಕತೆ ನಡೆಯುತ್ತದೆ. ಅವು ಕೂಡ ಹಾಸ್ಯಭರಿತವಾದ ಮಾತುಗಳು. ಬಳಿಕ ಅನುಷ್ಕಾ ನನಗೆ ಈಗ ಎರಡನೆಯ ಮಗುವಾಗಿದ್ದು, ಅದಕ್ಕೊಂದು ಹೆಸರು ಇಡಿ ಎಂದು ಸೂಚಿಸುತ್ತಾರೆ. ಆಗ ಗುರುಗಳು ಸುಮ್ಮನೇ ಇಡಲು ಆಗುವುದಿಲ್ಲ. ದಕ್ಷಿಣೆ ನೀಡಿ ಎನ್ನುತ್ತಾರೆ. ಆಗ ವಿರಾಟ್​ ಕೊಹ್ಲಿ ದಕ್ಷಿಣೆ ರೂಪದಲ್ಲಿ ತಂದಿದ್ದ ಹಣ್ಣು-ಹಂಪಲು ಕಾಯಿಗಳನ್ನು ಎಡಗೈಲಿ ಇಡುತ್ತಾರೆ. ದಕ್ಷಿಣೆಯನ್ನು ಎಡಗೈಲಿಯಲ್ಲಿ ಕೊಟ್ಟಿದ್ದನ್ನು ನೋಡಿ ಗುರುಗಳು, ಆ ಕೈ ಆ ಕೈ ಎಂದು ಬಲಗೈಲಿ ನೀಡುವಂತೆ ಸೂಚಿಸುತ್ತಾರೆ. ಇಷ್ಟು ಹೇಳುತ್ತಿದ್ದಂತೆಯೇ ದಂಪತಿ ಎದ್ದು ಹೋಗುತ್ತಾರೆ. ಗುರುಗಳಿಗೆ ಏನು ಆಯಿತೆಂದು ಅರ್ಥ ಆಗುವುದಿಲ್ಲ. ಈ ಕೈಯಲ್ಲಿ ಆ ಕೈ ಅಂದ್ರೆ ಬಲಗೈಲಿ ಕೊಡುವಂತೆ ಹೇಳಿದ್ರೆ ಯಾಕೆ ಎದ್ದು ಹೋದರು ಎಂದು ಅಂದುಕೊಳ್ಳುವಷ್ಟರಲ್ಲಿ ಬ್ರೇಕಿಂಗ್​ ನ್ಯೂಸ್​ ಬರುತ್ತದೆ. ವಿರುಷ್ಕಾ ದಂಪತಿ ತಮ್ಮ ಮಗುವಿನಗೆ ಅಕಾಯ್​ ಎಂದು ಹೆಸರಿಟ್ಟಿದ್ದಾರೆ ಎಂದು! ​

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ‘ವಿರುಷ್ಕಾ’ ದಂಪತಿ 2ನೇ ಮಗುವಿನ ತಂದೆಯಾಗಿದ್ದಾರೆ. ಇದೇ ಫೆಬ್ರವರಿ 15 ರಂದು ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 2021ರಲ್ಲಿ ಅನುಷ್ಕಾ ಶರ್ಮಾ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಹೆಣ್ಣು ಮಗುವಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಜನವರಿ 11ರಂದು ಕೊಹ್ಲಿ ದಂಪತಿ ವಮಿಕಾಳ 3ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. 2ನೇ ಮಗುವಾಗಿ 5 ದಿನಗಳ ಬಳಿಕ ಕೊಹ್ಲಿ 2ನೇ ಬಾರಿಗೆ ತಂದೆಯಾಗಿರುವ ಸಂತಸ ಹಂಚಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ