ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!

Twitter
Facebook
LinkedIn
WhatsApp
Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!

Vidya Balan :ಬಾಲಿವುಡ್​ನ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಪೊಲೀಸ್​ ಠಾಣೆ ಮಟ್ಟಿಲೇರಿದ್ದಾರೆ. ಅವರ ಹೆಸರಿನಲ್ಲಿ ದೊಡ್ಡ ಮೋಸ ನಡೆದಿದೆ. ಅನೇಕ ದಿನಗಳಿಂದ ನಡೆಯುತ್ತಿದ್ದ ವಂಚನೆಯ ಬಗ್ಗೆ ನಟಿಗೆ ತಡವಾಗಿ ಗೊತ್ತಾಗಿದೆ. ಹಾಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲವು ಕಿಡಿಗೇಡಿಗಳು ವಿದ್ಯಾ ಬಾಲನ್​ ಹೆಸರಿನಲ್ಲಿ ನಕಲಿ ಸೋಶಿಯಲ್​ ಮೀಡಿಯಾ ಖಾತೆಗಳನ್ನು ತರೆದು ಹಣ ವಸೂಲಿ ಮಾಡುವ ದಂಧೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಈಗ ಬೆಳಕಿಗೆ ಬಂದಿದ್ದು, ವಿದ್ಯಾ ಬಾಲನ್​ ಅವರು ಕಾನೂನಿನ ಮೊರೆ ಹೋಗಿದ್ದಾರೆ.

ಚಿತ್ರರಂಗ ಎಂಬುದು ಮಾಯಾ ಲೋಕ. ಇಲ್ಲಿ ಕೆಲಸ ಮಾಡಬೇಕು, ಅವಕಾಶ ಪಡೆದುಕೊಳ್ಳಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಈ ಆಸೆಯನ್ನೇ ಟಾರ್ಗೆಟ್​ ಮಾಡಿಕೊಂಡು ಕೆಲವರ ವಂಚನೆ ನಡೆಸುತ್ತಾರೆ. ಅದಕ್ಕೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳ ಹೆಸರು ಬಳಸುತ್ತಾರೆ. ಈ ಹಿಂದೆ ಸಲ್ಮಾನ್​ ಖಾನ್​ ಅವರ ಹೆಸರು ದುರ್ಬಳಕೆ ಆಗಿತ್ತು. ಈಗ ವಿದ್ಯಾ ಬಾಲನ್​ ಅವರ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡಿದ್ದು ತಿಳಿದುಬಂದಿದೆ. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

vidya balan

ವಿದ್ಯಾ ಬಾಲನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರ ಹೆಸರಿನಲ್ಲಿ ನಕಲಿ ಇನ್​ಸ್ಟಾಗ್ರಾಮ್​ ಖಾತೆ ತೆರೆದ ಕಿಡಿಗೇಡಿಗಳು ಜನರಿಂದ ಹಣ ವಸೂಲಿ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ವಿದ್ಯಾ ಬಾಲನ್​ ಅವರ ಹೆಸರಿಗೆ ಕಳಂಕ ಬರುತ್ತಿದೆ. ಈ ರೀತಿಯ ಕೃತ್ಯ ನಡೆದಿದೆ ಎಂಬುದು ತಮ್ಮ ಗಮನಕ್ಕೆ ಬಂದ ಕೂಡಲೇ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಜನರನ್ನು ವಂಚಿಸುವ ಉದ್ದೇಶದಿಂದ ಕಿಡಿಗೇಡಿಗಳು ವಿದ್ಯಾ ಬಾಲನ್​ ಅವರ ಹೆಸರಿನಲ್ಲಿ ಈ-ಮೇಲ್​ ಖಾತೆಯನ್ನೂ ತೆರೆದಿದ್ದಾರೆ. ಆ ಮೂಲಕ ಅನೇಕರಿಗೆ ಸಂದೇಶ ಕಳಿಸಿದ್ದಾರೆ. ಚಿತ್ರರಂಗದಲ್ಲಿ ಇರುವ ಸೆಲೆಬ್ರಿಟಿಗಳನ್ನೂ ವಂಚಿಸಲು ಪ್ರಯತ್ನಿಸಲಾಗಿದೆ. ವಿದ್ಯಾ ಬಾಲನ್​ ಹೆಸರಿನಲ್ಲಿ ಮೋಸ ನಡೆಯುತ್ತಿದೆ ಎಂಬುದು ಇತ್ತೀಚೆಗೆ ಕಾಸ್ಟ್ಯೂಮ್​ ಡಿಸೈನರ್​ ಒಬ್ಬರಿಗೆ ತಿಳಿದು ಬಂದಿದೆ. ಅದನ್ನು ಅವರು ನಟಿಗೆ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ವಿದ್ಯಾ ಬಾಲನ್​ ಅವರು ದೂರು ದಾಖಲಿಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿದ್ಯಾ ಬಾಲನ್​ ಅವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ತಮಗೆ ಸೂಕ್ತವಾದ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ಭೂಲ್​ ಭುಲಯ್ಯ 3’ ಸಿನಿಮಾಗೆ ಅವರು ಸಹಿ ಮಾಡಿದ್ದಾರೆ. 2007ರಲ್ಲಿ ಬಂದ ಸೂಪರ್​ ಹಿಟ್​ ‘ಭೂಲ್​ ಭುಲಯ್ಯ’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದ ಅವರು ಅದರ ಸೀಕ್ವೆಲ್​ನಲ್ಲಿ ಮಿಸ್​ ಆಗಿದ್ದರು. ಈಗ ‘ಭೂಲ್​ ಭುಲಯ್ಯ 3’ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ