ರಶ್ಮಿಕಾ ಜೊತೆಗಿನ ನಿಶ್ಚಿತಾರ್ಥದ ಬಗ್ಗೆ ಮೌನಮುರಿದ ವಿಜಯ್ ದೇವರಕೊಂಡ
ಕೆಲದಿನಗಳಿಂದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಾಗಿದ್ದಾರೆ. ಬರುವ ಫೆಬ್ರವರಿ ತಿಂಗಳಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ ಈ ಕುರಿತು ಇಬ್ಬರೂ ತುಟಿಬಿಚ್ಚಿರಲಿಲ್ಲ.
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ (Rashmika Mandanna) ಒಟ್ಟಿಗೆ ವಾಸಿಸುತ್ತಿದ್ದಾರೆ. ನಿಶ್ಚಿತಾರ್ಥವಾದ ಬಳಿಕ ತಮ್ಮ ಸಂಬಂಧವನ್ನು ಬಹಿರಂಗಪಡಿಲಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿತ್ತು. ಆದರೆ ಇಬ್ಬರು ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರೂ, ತಮ್ಮ ಸಂಬಂಧದ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಆದರೆ ಇದೀಗ ನಟ ವಿಜಯ್ ದೇವರಕೊಂಡ ಅವರೇ ಮೌನ ಮುರಿದಿದ್ದಾರೆ.
ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದಾಗ ರಶ್ಮಿಕಾ ಮಂದಣ್ಣ ಅವರೊಂದಿಗಿನ ನಿಶ್ಚಿತಾರ್ಥದ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದರು. ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆಯಾಗುವುದಿಲ್ಲ. ಮೀಡಿಯಾದವರು ನನ್ನನ್ನು ಎರಡು ವರ್ಷಗಳಿಗೊಮ್ಮೆ ಮದುವೆಯಾಗಲು ಬಯಸುತ್ತಾರೆ ಎಂದನಿಸುತ್ತದೆ . ಪ್ರತಿ ವರ್ಷ ನಾನು ಈ ವದಂತಿಯನ್ನು ಕೇಳುತ್ತಲೇ ಬಂದಿದ್ದೇನೆ. ನನ್ನ ಮದುವೆಗೋಸ್ಕರ ಅವರು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಎಂಬ ಎರಡು ಚಿತ್ರಗಳಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಎರಡೂ ಚಿತ್ರಗಳು ಸಾಕಷ್ಟು ಮೆಚ್ಚುಗೆಯನ್ನು ಪಡೆದಿವೆ. ಕೊನೆಯದಾಗಿ ‘ಕುಶಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ವಿಜಯ್ ಪ್ರಸ್ತುತ ‘ಫ್ಯಾಮಿಲಿ ಸ್ಟಾರ್’ ಮತ್ತು ನಿರ್ದೇಶಕ ಗೌತಮ್ ತಿನ್ನನೂರಿ ಅವರ ‘ವಿಡಿ 12’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
ಪ್ರೇಮ್ ಮತ್ತು ಮಾನ್ವಿತಾ ಕಾಂಬಿನೇಷನ್ ಚಿತ್ರಕ್ಕೆ ಟೈಟಲ್ ಫಿಕ್ಸ್
ಕೆ.ಆರ್.ಎಸ್ ಪ್ರೊಡಕ್ಷನ್ಸ್ ನ ಚೊಚ್ಚಲ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಪ್ಪಾ ಐ ಲವ್ ಯೂ ಶೀರ್ಷಿಕೆ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದು, ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.
ಜೂಟಾಟ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ಅಥರ್ವ್ ಆರ್ಯ ಅಪ್ಪಾ ಐ ಲವ್ ಯೂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಎರಡನೇ ಪ್ರಯತ್ನ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದೇ ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.
ಅಪ್ಪಾ ಐ ಲವ್ ಯೂ ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, k. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.