ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ವಿಜಯೇಂದ್ರ ಪ್ರಮಾಣವಚನ ಸ್ವೀಕಾರ ; ಬಿಜೆಪಿ ಪಾಳಯದಲ್ಲಿ ಸಂಭ್ರಮ!

Twitter
Facebook
LinkedIn
WhatsApp
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ವಿಜಯೇಂದ್ರ ಪ್ರಮಾಣವಚನ ಸ್ವೀಕಾರ ; ಬಿಜೆಪಿ ಪಾಳಯದಲ್ಲಿ ಸಂಭ್ರಮ!
ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಆಯ್ಕೆಯಾಗಿ ಮಿಂಚಿನ ಸಂಚಲನಕ್ಕೆ ಕಾರಣವಾಗಿರುವ ಬಿವೈ ವಿಜಯೇಂದ್ರ(BY Vijayendra )ಇಂದು(ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ರಾತ್ರಿಯೇ ಬಿಜೆಪಿ ಕಚೇರಿಯಲ್ಲಿ ಹೋಮ, ಹವನ

ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಕಮಲಪಾಳಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.

ಮೊನ್ನೆ ಮಠಮಾನ್ಯಗಳಿಗೆ ರೌಂಡ್ಸ್ ಹಾಕಿದ್ದ ವಿಜಯೇಂದ್ರ, ನಿನ್ನೆ ಮುಳುಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ವಿನಾಯಕನ ದರ್ಶನ ಪಡೆದಿದ್ದರು, ಅಲ್ಲದೇ ಸಂಜೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಶಕ್ತಿದೇವತೆ ಅಣ್ಣಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದದ್ದರು.

ವಿಜಯೇಂದ್ರ ಆಯ್ಕೆಯಿಂದಾಗಿ ಯಡಿಯೂರಪ್ಪ ವಿರೋಧಿ ಬಣ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ ಮೌನಕ್ಕೆ ಜಾರಿದ್ದಾರೆ. ಹೀಗಾಗಿ ಇಂದಿನ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಬಂಡಾಯ ಬಾವುಟದ ಬಿಸಿ ತಟ್ಟಲಿದ್ದು, ಹಲವು ನಾಯಕರು ಗೈರಾಗುವ ಸಾಧ್ಯತೆ ಇದೆ.

ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಜಿಲ್ಲಾಧ್ಯಕ್ಷರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಗೈರಾಗಲಿದ್ದು, ಇನ್ನುಳಿದಂತೆ ಅಸಮಾಧಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎದ್ದಿದ್ದು, ಮುಂದೆ ವಿಜಯೇಂದ್ರ ಇದೆಲ್ಲವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾರೆ ಎನ್ನುವುದೇ ಸದ್ಯದ ಕುತೂಹಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist