ಸದನದ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಬಿಜೆಪಿಯ 10 ಶಾಸಕರು ಅಧಿವೇಶನ ಮುಗಿಯವರೆಗೂ ಅಮಾನತು!

ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ.ಆರ್ ಅಶೋಕ್, ವಿ ಸುನಿಲ್ ಕುಮಾರ್, ಉಮನಾಥ ಕೋಟ್ಯಾನ್, ಅಶ್ವಥ್ ನಾರಾಯಣ್, ಅರಗ ಜ್ಞಾನೇಂದ್ರ, ಧೀರಜ್ ಮುನಿರಾಜು, ಯಶ್ ಪಾಲ್ ಸುವರ್ಣ, ವೇದವಾಸ್ ಕಾಮತ್, ಭರತ್ ಶೆಟ್ಟಿ, ಅರವಿಂದ್ ಬೆಲ್ಲದ್ ಅಸಭ್ಯವಾಗಿ ವರ್ತಿಸಿದ್ದಕ್ಕೆ ಸ್ಪೀಕರ್ ಯುಟಿ ಖಾದರ್ ಹೆಸರನ್ನು ಗುರುತಿಸಿದ್ದಾರೆ ಮತ್ತು ಅಧಿವೇಶನ ಮುಗಿಯುವವರೆಗೂ ಶಾಸಕರನ್ನು ಅಮಾನತುಗೊಳಿಸಲಾಗಿದೆ.
ಸದನದ ಶಿಸ್ತಿನ ನಿಯಮವನ್ನು ಉಲ್ಲಂಘನೆ ಮಾಡಿದಕ್ಕೆ ಅಮಾನತು. ಮತ್ತು ಸಧನವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ.
ಕಲಾಪದ ವೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಸಂಬಂಧ ಸ್ಪೀಕರ್ ಯುಟಿ ಖಾದರ್ ಅವರಿಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದಾರೆ. ಇದೀಗ ಈ ದೂರಿನ ಅಧಾರದ ಮೇಲೆ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿ, ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ರಮ ಕೈಗೊಂಡಿರುವ ಸ್ಪೀಕರ್ ಯುಟಿ ಖಾದರ್ ಅವರು ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿದ್ದಾರೆ.
ಪ್ರೋಟೋಕಾಲ್ ಪ್ರಕಾರ, ಸ್ಟೇಟ್ ಗೆಸ್ಟ್ ಎಂದು ಅಧಿಕಾರಿಗಳು ನಾಯಕರನ್ನ ಕರ್ಕೊಂಡು ಬಂದಿದ್ದಾರೆ. ಪ್ರೋಟೋಕಾಲ್ ಪ್ರಕಾರ ಅಧಿಕಾರಿಗಳು ನಡ್ಕೊಂಡಿದಾರೆ. ಸಿಂಪಲ್ ವಿಚಾರಕ್ಕೆ ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷನ ಮೇಲೆ ಪೇಪರ್ ಎಸೀತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಕಾನೂನು ಕ್ರಮ ಆಗಬೇಕು ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿದರು.