ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!

Twitter
Facebook
LinkedIn
WhatsApp
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದ (Manipur Violence) ತೆಂಗ್ನೌಪಾಲ್ ಜಿಲ್ಲೆಯಲ್ಲಿ (Tengnoupal district) ಸೋಮವಾರ ಮಧ್ಯಾಹ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು (Fresh violence), ಕನಿಷ್ಠ 13 ಜನರು ಮೃತಪಟ್ಟಿದ್ದಾರೆ. ತೆಂಗ್ನೌಪಾಲ್ ಜಿಲ್ಲೆಯ ಸೈಬೋಲ್ ಬಳಿಯ ಲೀತು ಗ್ರಾಮದಲ್ಲಿ ಮಧ್ಯಾಹ್ನದ ಸುಮಾರಿಗೆ ಎರಡು ಗುಂಪುಗಳ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಭದ್ರತಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರ ನಡೆದ ಸ್ಥಳದಿಂದ ಭದ್ರತಾ ಪಡೆಗಳು ಕೇವಲ 10 ಕಿ.ಮೀ ದೂರದಲ್ಲಿದ್ದವು. ನಮ್ಮ ಪಡೆಗಳು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಲೀತು ಗ್ರಾಮದಲ್ಲಿ 13 ಶವಗಳ ಬಿದ್ದಿದ್ದವು. ಆದರೆ, ಅಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಕಂಡ ಬರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರೆಲ್ಲರೂ ಲೀತು ಗ್ರಾಮದಲ್ಲವರೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅವರು ಬೇರೆ ಸ್ಥಳದಿಂದ ಬಂದು ಇಲ್ಲಿನ ಸ್ಥಳೀಯ ಪ್ರತ್ಯೇಕತಾ ಗುಂಪುಗಳ ಜತೆಗೆ ಸಂಘರ್ಷ ನಡೆಸಿರಬಹುದು. ಆಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮತ್ತೊಂದೆಡೆ, ಮೃತಪಟ್ಟವರ ಗುರುತು ಪತ್ತೆಯನ್ನು ಪೊಲೀಸರಲಾಗಲೀ, ಭದ್ರತಾ ಪಡೆಗಳಾಗಲೇ ಖಚಿತಪಡಿಸಿಲ್ಲ.

ಈಗಾಗಲೇ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಮತ್ತು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಮೇ 3ರಿಂದ ಸಂಘರ್ಷ ನಡೆಯುತ್ತಿದೆ. ಎರಡೂ ಸಮುದಾಯಗಳ ನಡುವಿನ ಸಂಘರ್ಷದಲ್ಲಿ ಇದವರೆಗೆ ಕನಿಷ್ಠ 182 ಜನರು ಮೃತಪಟ್ಟು, 50 ಸಾವಿರಕ್ಕೂ ಅಧಿಕ ಜನರು ನಿರ್ಗತಿಕರಾಗಿದ್ದಾರೆ.

ಹಿಂಸಾಚಾರಪೀಡಿತ ಮಣಿಪುರ ರಾಜ್ಯದ ಗಡಿ ಪ್ರದೇಶಗಳನ್ನು ಹೊರತುಪಡಿಸಿ ಕೆಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಅಧಿಕಾರಿಗಳು ಭಾನುವಾರ ಮಾತ್ರ ಹಿಂತೆಗೆದುಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಮತ್ತೆ ಗುಂಡಿನ ಚಕಮಕಿ ನಡೆದಿದೆ, ಹಿಂಸಾಚಾರ ಭುಗಿಲೆದ್ದಿದೆ.

ಹಿಂಸಾಚಾರಪೀಡಿತ ಕೆಲವು ಜಿಲ್ಲೆಗಳಲ್ಲಿನ ಪ್ರದೇಶಗಳು ಮೈತೈ ಅಥವಾ ಕುಕಿಗಳ ಪ್ರಾಬಲ್ಯವನ್ನು ಹೊಂದಿವೆ ಮತ್ತು ಕಳೆದ ಏಳು ತಿಂಗಳುಗಳಲ್ಲಿ ಹೆಚ್ಚಿನ ಹಿಂಸಾಚಾರ, ಗುಂಡಿನ ಚಕಮಕಿ, ಬೆಂಕಿ ಹಚ್ಚುವುದು ಮತ್ತು ಅಪಹರಣಗಳಿಗೆ ಈ ಪ್ರದೇಶವು ಸಾಕ್ಷಿಯಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರವು, ರಾಜ್ಯದ ಅತ್ಯಂತ ಹಳೆಯ ಉಗ್ರಗಾಮಿ ಸಂಘಟನೆಯಾದ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫೋರ್ಸ್ (ಯುಎನ್‌ಎಲ್‌ಎಫ್) ನೊಂದಿಗೆ ದಿಲ್ಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಾಲ್ಕು ದಿನಗಳ ನಂತರ, ನಿಷೇಧವನ್ನು ಹಿಂತೆಗೆದುಕೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’