ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರ ; ಮಹಿಳೆಯ ಗುಂಡಿಕ್ಕಿ ಹತ್ಯೆ!

Twitter
Facebook
LinkedIn
WhatsApp
WhatsApp Image 2023 07 16 at 1.33.24 PM

ಇಂಫಾಲ: ಮಣಿಪುರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎನ್ನಲಾಗಿದೆ.

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಸುತ್ತಮುತ್ತಲಿನ ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹಿಂಸಾಚಾರದಿಂದಾಗಿ ಸುದೀರ್ಘ ಅವಧಿಗೆ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೇ ತಿಂಗಳಲ್ಲಿ ಹಿಂಸಾಚಾರ ಆರಂಭಗೊಂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ