ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!

Twitter
Facebook
LinkedIn
WhatsApp
ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!

ಟೀಂ ಇಂಡಿಯಾ (Team India) ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿಗೆ (Boy Baby)  ಜನ್ಮ ನೀಡಿದ್ದಾರೆ.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ.  ಈ ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ. ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್‌’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್‌-ಭಾರತ ಟೆಸ್ಟ್‌ ಸರಣಿ ನಡೆಯುತ್ತಿದೆ. ಐದು ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ನಡೆದಿವೆ. ಭಾರತ 3-2 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ ಬಾಕಿಯಿದೆ. ಟೆಸ್ಟ್‌ ಸರಣಿಗೆ ವಿರಾಟ್‌ ಕೊಹ್ಲಿ ಅಲಭ್ಯರಾಗಿದ್ದಾರೆ.

ವೈಯಕ್ತಿಕ ಕಾರಣ ನೀಡಿ ವಿರಾಟ್‌ ಕೊಹ್ಲಿ ಟೆಸ್ಟ್‌ ಸರಣಿಯಿಂದ ಹೊರಗಿದ್ದಾರೆ. ಅನುಷ್ಕಾ ಶರ್ಮಾ ಈಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ಟೆಸ್ಟ್‌ ಸರಣಿಯಿಂದ ಹೊರಗಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ