ಸೋಮವಾರ, ಫೆಬ್ರವರಿ 24, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ; ಮನೆಯೊಳಗೆ ಸಿಲುಕಿದ ಮಹಿಳೆ - ಕ್ರೇನ್ ಮೂಲಕ ವಾಹನ ತೆರವು!

Twitter
Facebook
LinkedIn
WhatsApp
mrunalthakur 2023522 2

ವಿಟ್ಲ : ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ–ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.

ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಇಂದು ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದಿದೆ.

ಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ.

ಕೋಳಿ ಸಾಗಾಟದ ಪಿಕಪ್ ಗೆ ಅಪಘಾತವಾಗಿದ್ದು, ಅಪಘಾತದಿಂದ ನೂರಾರು ಕೋಳಿಗಳು ಸತ್ತಿವೆ ಎನ್ನಲಾಗಿದೆ.

ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು. ಮಹಿಳೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

IMG 20230714 WA0008 1140x1520 1

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಆಗಮಿಸಿದ್ದು, ಕ್ರೇನ್ ಬಳಸಿ ಕಾರ್ಯಾಚರಣೆ ನಡೆಸಿ ವಾಹನ ಮೇಲೆತ್ತಲಾಯಿತು.

ಕಾಸರಗೋಡು ಕಡೆ ತೆರಳುತ್ತಿದ್ದ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಷಯ ತಿಳಿದ ಹಿನ್ನೆಲೆ ಅವರು ಕೂಡ ಘಟನಾ ಸ್ಥಳಕ್ಕೆ ಆಗಮಿಸಿದ್ದರು.

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಪತಿ ವಿರುದ್ಧ ಕೊಲೆ ಆರೋಪ

ಹಾಸನ: ವರದಕ್ಷಿಣೆ (Dowry) ಕಿರುಕುಳಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಪತಿ ವಿರುದ್ಧ ಕೊಲೆ ಆರೋಪ ಹೊರಿಸಿರುವ ಘಟನೆ ಹಾಸನ (Hassan) ತಾಲ್ಲೂಕಿನ, ಯಡಿಯೂರು ಗ್ರಾಮದಲ್ಲಿ ನಡೆದಿದೆ.

ಅನಿತಾ (27) ಮೃತಪಟ್ಟ ಮಹಿಳೆ. 8 ವರ್ಷಗಳ ಹಿಂದೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಅನಿತಾಳನ್ನ ಯಡಿಯೂರು ಗ್ರಾಮದ ಯೋಗೇಶ್‌ಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು, ಮೊದಲ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು.

mrunalthakur 2023522 3

ಆರಂಭದಲ್ಲಿ ಸಂಸಾರ ಚೆನ್ನಾಗಿಯೇ ಇತ್ತು. ಕ್ರಮೇಣ ಯೋಗೇಶ್‌ ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಹತ್ತಾರು ಬಾರಿ ಸಂದಾನ ಮಾಡಿ ಕಳುಹಿಸಲಾಗಿತ್ತು. ಎರಡು ಬಾರಿ ಪೊಲೀಸ್‌ ಠಾಣೆಗೂ ದೂರು ನೀಡಲಾಗಿತ್ತು. ಆದ್ರೆ ಯೋಗೇಶ್‌ ವರದಕ್ಷಿಣೆಗಾಗಿ ಕಿರುಕುಳ ನೀಡುವುದನ್ನ ಬಿಟ್ಟಿರಲಿಲ್ಲ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. 

ಕಳೆದ ಒಂದು ತಿಂಗಳ ಹಿಂದೆಯೂ ಪತಿ ಜಗಳ ತೆಗೆದಿದ್ದರಿಂದ ಅನಿತಾ ತವರು ಮನೆಗೆ ಬಂದಿದ್ದಳು. ಮತ್ತೆ ರಾಜೀ ಸಂಧಾನ ಆದ ನಂತರ ಯೋಗೇಶ್‌ ಆಕೆಯನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಬುಧವಾರ ಅನಿತಾ ತನ್ನ ಪೋಷಕರಿಗೆ ಕರೆ ಮಾಡಿ ಹಲ್ಲೆ ಮಾಡುತ್ತಿದ್ದಾನೆ ಬನ್ನಿ ಅಂತಾ ಕರೆದಿದ್ದಾಳೆ. ಪೋಷಕರು ಬರುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಬಳಿಕ ಪತಿ ಆಕೆಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ.

ಅನಿತಾಳನ್ನ ಯೋಗೇಶ್ ಕೊಲೆ ಮಾಡಿದ್ದು, ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಸದ್ಯ ಕೇಸ್‌ ದಾಖಲಿಸಿಕೊಂಡಿರುವ ಹಾಸನ ಬಡಾವಣೆ ಪೊಲೀಸರು (Hassan Police) ತನಿಖೆ ಮುಂದುವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist