ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Vivo T2 5G ಮತ್ತು T2x 5G ಏಪ್ರಿಲ್ 11 ರಂದು ಭಾರತದಲ್ಲಿ ಬಿಡುಗಡೆ!

Twitter
Facebook
LinkedIn
WhatsApp
Vivo T2 5G ಮತ್ತು T2x 5G ಏಪ್ರಿಲ್ 11 ರಂದು ಭಾರತದಲ್ಲಿ ಬಿಡುಗಡೆ!

ಭಾರತದಲ್ಲಿ 5ಜಿ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಯೋ, ಏರ್ಟೆಲ್ 5ಜಿ (Airtel 5G) ಸೇವೆ ದೇಶದೆಲ್ಲೆಡೆ ವಿಸ್ತರಣೆ ಆಗುತ್ತಿದ್ದು ಪ್ರಸಿದ್ಧ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳು ಒಂದರ ಹಿಂದೆ ಒಂದರಂತೆ 5ಜಿ ಬೆಂಬಲ ನೀಡುವ ಮೊಬೈಲ್ (Mobile) ಅನ್ನು ರಿಲೀಸ್ ಮಾಡುತ್ತಿದೆ. ಅದುಕೂಡ ಬಜೆಟ್ ಬೆಲೆಗೆ ಎಂಬುದು ವಿಶೇಷ. ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಎರಡು 5G ಫೋನ್ ಬಿಡುಗಡೆ ಮಾಡಲು ವಿವೋ ಸಂಸ್ಥೆ ತಯಾರಿ ನಡೆಸಿದೆ. ವಿವೋಕಂಪನಿ ವಿವೋ ಟಿ2 5ಜಿ (Vivo T2 5G) ಮತ್ತು ವಿವೋ T2x 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಇದೇ ಏಪ್ರಿಲ್‌ 11 ರಂದು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಫೋನಿನ ಬೆಲೆ ಎಷ್ಟು ಎಂಬುದು ಅಧಿಕೃತವಾಗಿ ಬಹಿರಂಗವಾಗಿಲ್ಲ, ಕೆಲ ಫೀಚರ್​ಗಳು ಆನ್​ಲೈನ್​ನಲ್ಲಿ ಸೋರಿಕೆ ಆಗಿದೆ.

ವಿವೋ T2 5G:

ವಿವೋ T2 5G ಸ್ಮಾರ್ಟ್​ಫೋನ್‌ ಅಧಿಕ ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅಳವಡಿಸಲಾಗಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನಿನ ಬೆಲೆ 20,000 ರೂ. ಆಸುಪಾಸಿನಲ್ಲಿ ಇರಬಹುದು ಎಂಬ ಮಾತಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ರಚನೆ ಒಳಗೊಂಡಿದೆ. ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಆಗಿರಲಿದೆ. ಇನ್ನುಳಿದ ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್‌ ಮತ್ತು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿರಲಿವೆ. ಹಾಗೆಯೇ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. 4700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದು ಎಷ್ಟು ವೋಲ್ಟ್ ಚಾರ್ಜಿಂಗ್ ಬೆಂಬಲಿಸುತ್ತೆ ಎಂಬುದು ತಿಳಿದುಬಂದಿಲ್ಲ.

ವಿವೋ T2x 5G:

ವಿವೋ T2x 5G ಸ್ಮಾರ್ಟ್​ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ+ ಎಲ್​ಸಿಡಿ ಡಿಸ್‌ಪ್ಲೇ ಹೊಂದಿರಲಿದೆ. ಇದುಕೂಡ ಬಲಿಷ್ಠವಾದ ಮೀಡಿಯಾಟೆಕ್ ಡೈಮನ್ಸಿಟಿ 1300 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. 4GB/ 6GB/ 8GB RAM ಮತ್ತು 128GB ಸ್ಟೋರೇಜ್‌ ಹೊಂದಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. 6000mAh ಬ್ಯಾಟರಿಯ ಜೊತೆಗೆ 44W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ