ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Vivo X100: ಮಾರುಕಟ್ಟೆಯಲ್ಲಿ ಹೊಸದಾಗಿ ಬಿಡುಗಡೆಗೊಳ್ಳಲು ಸಜ್ಜಾದ ವಿವೋ X100; ಇಲ್ಲಿದೆ ಇದರ ಫೀಚರ್ಸ್

Twitter
Facebook
LinkedIn
WhatsApp
Vivo X100: ಮಾರುಕಟ್ಟೆಯಲ್ಲಿ ಹೊಸದಾಗಿ ಬಿಡುಗಡೆಗೊಳ್ಳಲು ಸಜ್ಜಾದ ವಿವೋ X100; ಇಲ್ಲಿದೆ ಇದರ ಫೀಚರ್ಸ್

ಚೀನಾದ ಪ್ರಸಿದ್ಧ ಸ್ಮಾರ್ಟ್‌ಫೋನ್ ತಯಾರಕ ಕಂಪನಿ ವಿವೋ ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದರ ನಡುವೆ ನೂತನ ಫೋನುಗಳ ಘೋಷಣೆ ಕೂಡ ಮಾಡುತ್ತಿದೆ. ಅದರಂತೆ ಇದೀಗ ಟೆಕ್ ಲೋಕದಲ್ಲಿ ರೋಚಕತೆ ಸೃಷ್ಟಿಸಿರುವ ಹೊಸ ವಿವೋ X100 (vivo x100) ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಈ ಫೋನ್ ಇದೇ ನವೆಂಬರ್ 13, 2023 ರಂದು ಅನಾವರಣಗೊಳ್ಳಲಿದೆ. ವೆನಿಲ್ಲಾ ಮಾದರಿಯ ಈ ಫೋನ್​ನಲ್ಲಿ ವಿವೋ X100 ಪ್ರೊ ಮತ್ತು X100 ಪ್ರೊ ಕೂಡ ಇರುವ ಸಾಧ್ಯತೆ ಇದೆ.

ಟೆಕ್ ಔಟ್‌ಲೆಟ್ 91ಮೊಬೈಲ್ಸ್, ವಿವೋ X100 ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಬಹಿರಂಗಪಡಿಸಿದೆ. ಈ ಸ್ಮಾರ್ಟ್‌ಫೋನ್ ಚೀನಾದಲ್ಲಿ CNY 3,999 ರ ಆರಂಭಿಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಇದರ ಬೆಲೆ ಭಾರತದಲ್ಲಿ 45,550 ರೂ. ಆಸುಪಾಸಿನಲ್ಲಿ ಇರಬಹುದು. ಇದು ಬಿಳಿ, ನೀಲಿ, ಕಿತ್ತಳೆ ಮತ್ತು ಕಪ್ಪು ಎಂಬ ನಾಲ್ಕು ಬಣ್ಣಗಳಲ್ಲಿ ರಿಲೀಸ್ ಆಗಲಿದೆ. 12GB + 256GB, 16GB + 256GB, 16GB + 512GB ಮತ್ತು 16GB + 1TB ಹೀಗೆ ನಾಲ್ಕು ಸ್ಟೋರೇಜ್​ನಲ್ಲಿ ಇರಲಿದೆ.

vivo X100

ಆದಾಗ್ಯೂ, ಮತ್ತೊಂದು ಮೂಲಗಳಿಂದ ಇದರ ಬೆಲೆ 50,000 ಕ್ಕಿಂತ ಹೆಚ್ಚು ಇರಬಹುದು ಎಂದು ಹೇಳಲಾಗಿದೆ. ಈ ಫೋನ್ 2023 ರ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ವಿವೋ X100 ಫೀಚರ್ಸ್ ಏನಿರಬಹುದು?

ಈ ಸ್ಮಾರ್ಟ್‌ಫೋನ್ 6.78-ಇಂಚಿನ 1.5K ಡಿಸ್​ಪ್ಲೇ 120Hz ರಿಫ್ರೆಶ್ ದರದೊಂದಿಗೆ ಬಿಡುಗಡೆ ಆಗಬಹುದು. 16GB LPDDR5T RAM ಮತ್ತು 1TB UFS 4.0 ಆಂತರಿಕ ಸಂಗ್ರಹಣೆಯೊಂದಿಗೆ ಡೈಮೆನ್ಸಿಟಿ 9300 ಚಿಪ್‌ಸೆಟ್ ಅನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಇತ್ತೀಚಿನ OriginOS 14 ನಲ್ಲಿ ರನ್ ಆಗುವ ಸಾಧ್ಯತೆಯಿದೆ.

ವಿವೋ X100 ಫೋನ್ 120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಹೊಂದಿರಬಹುದು. ಕ್ಯಾಮೆರಾ ವಿಷಯಕ್ಕೆ ಬಂದರೆ, ಈ ಹ್ಯಾಂಡ್‌ಸೆಟ್ 50MP ಮುಖ್ಯ ಕ್ಯಾಮೆರಾ, 50MP ಅಲ್ಟ್ರಾವೈಡ್ ಮತ್ತು 64MP ಟೆಲಿಫೋಟೋ ಲೆನ್ಸ್‌ಗಳನ್ನು ಹಿಂಭಾಗದಲ್ಲಿ ನೀಡಬಹುದು. 32MP ಸೆಲ್ಫಿ ಕ್ಯಾಮೆರಾ ಫೋನ್‌ನ ಡಿಸ್ಪ್ಲೇ ಮೇಲೆ ನೀಡಲಾಗಿದೆ. ಭದ್ರತೆಗಾಗಿ, ಇದು ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಆಯ್ಕೆ ಇರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist