Vivo Y200: ಮಾರುಕಟ್ಟೆಗೆ ಕಾಲಿಟ್ಟ ವಿವೋ Y200 ಸ್ಮಾರ್ಟ್ಫೋನ್ ; ಹೇಗಿದೆ ಇದರ ಫೀಚರ್ಸ್
ಚೀನಾ ಮೂಲದ ವಿವೋ ಮೊಬೈಲ್ ಕಂಪೆನಿಯು ದೇಶಿಯ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿ ಗಮನ ಸೆಳೆದಿದೆ ಎನಿಸಿಕೊಂಡಿದೆ. ಆ ಪೈಕಿ ವಿವೋ Y ಸರಣಿಯ ಫೋನ್‌ಗಳು ಟ್ರೆಂಡಿ ಆಗಿದ್ದು, ಆ ಪೈಕಿ ಇತ್ತೀಚಿನ ವಿವೋ Y100 ಹಾಗೂ ವಿವೋ Y100A ಫೋನ್‌ಗಳು ಅಧಿಕ ಆಕರ್ಷಣೆ ಪಡೆದಿವೆ. ಅದರ ಮುಂದುವರಿದ ಭಾಗವಾಗಿ ಇದೀಗ ವಿವೋ ಸಂಸ್ಥೆಯು ನೂತನವಾಗಿ ವಿವೋ Y200 ಫೋನ್ ಅನ್ನು ಬಿಡುಗಡೆ ಮಾಡಿದೆ.
ಹೌದು, ವಿವೋ ಕಂಪೆನಿ ಭಾರತದಲ್ಲಿ ಹೊಸ ವಿವೋ Y200 5G (Vivo Y200 5G) ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಪವರ್ ಕೂಡಾ ಒಳಗೊಂಡಿದೆ.
ಹಾಗೆಯೇ ಇದು ಸ್ನಾಪ್‌ಡ್ರಾಗನ್ 4 ಜೆನ್ 1 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಒಳಗೊಂಡಿದೆ. ಇದರ ಜೊತೆಗೆ 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಹಾಗಾದರೇ ವಿವೋ Y200 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ವಿವೋ Y200 5G ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಹಾಗೂ 800 nits ಬ್ರೈಟ್ನೆಸ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 394 PPI ಪಿಕ್ಸಲ್ ಸಾಂದ್ರತೆ ಅನ್ನು ಪಡೆದುಕೊಂಡಿದೆ.
ಯಾವ ಪ್ರೊಸೆಸರ್ ಸೌಲಭ್ಯ ಇದೆ
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 ಜೆನ್ 1 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಆಂತರೀಕ ಸ್ಟೋರೇಜ್ ಅನ್ನು ಹೊಂದಿದ್ದು, ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಲಭ್ಯ.
ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ವಿವೋದ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಬ್ಯಾಟರಿ ಬಲ ಎಷ್ಟಿದೆ
ವಿವೋ ಸಂಸ್ಥೆಯ ಈ ಫೋನ್ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ನೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಪವರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್ ಸಿ, ಜಿಪಿಎಸ್ ಮತ್ತು ಒಟಿಜಿ ಆಯ್ಕೆಗಳನ್ನು ಒಳಗೊಂಡಿದೆ.
ಬೆಲೆ ಮಾಹಿತಿ ಹಾಗೂ ಲಭ್ಯತೆ ವಿವರ
ವಿವೋ Y200 5G ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 21,999ರೂ. ಆಗಿದೆ. ಆರಂಭಿಕ ಕೊಡುಗೆಯಾಗಿ ಕೆಲವು ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ, 2,000ರೂ. ತ್ವರಿತ ರಿಯಾಯಿತಿ ಸಿಗಲಿದೆ. ಅಧಿಕೃತ ವಿವೋ ವೆಬ್‌ಸೈಟ್ ಹಾಗೂ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣಗಳ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್ ಗೋಲ್ಡ್ ಹಾಗೂ ಗ್ರೀನ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.