ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ; ಸಿದ್ದರಾಮಯ್ಯ ಘೋಷಣೆ..!

Twitter
Facebook
LinkedIn
WhatsApp
ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ; ಸಿದ್ದರಾಮಯ್ಯ ಘೋಷಣೆ..!

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದರು. ಅದರಲ್ಲಿ ಬಡ್ಡಿ ಮನ್ನಾ ಸಹ ಒಂದು. ಹಾಗಾದ್ರೆ ಅಧಿವೇಶನದ ಕೊನೆ ದಿನವಾದ ಇಂದು ಸಿಎಂ ಏನೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

  • ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ.
  • ಸಹಕಾರ ಬ್ಯಾಂಕ್ ಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
  • ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
  • ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
  • ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.
  • ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.

ಇವುಗಳಲ್ಲಿ ಬಡ್ಡಿ ಮನ್ನಾ ಪ್ರಮುಖವಾಗಿದೆ. ಆದ್ರ ಇದಕ್ಕೆ ವಿರೋಧ ಪಕ್ಷದ ನಾಯಕ ಆರ್ ಶೋಕ್ ಟೀಕಿಸಿದ್ದು, ರೈತರು ಅವಧಿಯೊಳಗೆ ಸಾಲ‌ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು/ ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist