2ನೇ ಪೋಕ್ಸೋ ಕೇಸ್ನಲ್ಲಿ ವಾರಂಟ್ ಜಾರಿ ; ಬಿಡುಗಡೆಯಾದ ನಾಲ್ಕೇ ದಿನಕ್ಕೆ ಮುರುಘಾಶ್ರೀ ಮತ್ತೆ ಅರೆಸ್ಟ್..!
ದಾವಣಗೆರೆ/ಚಿತ್ರದುರ್ಗ, (ನವೆಂಬರ್ 20): ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (sexually assaulting) ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ (Shivamurthy Sharanaru) ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು(ನವೆಂಬರ್ 20) ಕೋರ್ಟ್ ಅರೆಸ್ಟ್ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ್ದ ಮುರುಘಾಶ್ರೀ ಜಾಮೀನಿನ ಮೇಲೆ ನವೆಂಬರ್ 16ರಂದು ಬಿಡುಗಡೆಯಾಗಿದ್ದರು. ಆದ್ರೆ ಇದೀಗ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ. 2022 ಅಕ್ಟೋಬರ್ 13ರಂದು ಮುರುಘಾಶ್ರೀ ವಿರುದ್ಧ ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀ ಬಂಧನವಾಗಿದೆ.
ಇತ್ತೀಚೆಗೆ 1ನೇ ಪೊಕ್ಸೋ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ನವೆಂಬರ್ 16ರಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಎರಡೂ ಕಡೆಯ ವಾದ ಆಲಿಸಿದ್ದ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಅರೆಸ್ಟ್ ವಾರೆಂಟ್ ಆದೇಶ ನೀಡಿತ್ತು. ಹೀಗಾಗಿ ಪೊಲೀಸರು ಮುರುಘಾಶ್ರೀಗಳನ್ನು