ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂದಿನ ವರ್ಷದಿಂದ ಮಕ್ಕಳಿಗೆ ಸೈಕಲನ್ನು ವಿತರಿಸುತ್ತೇವೆ; ಮಧು ಬಂಗಾರಪ್ಪ

Twitter
Facebook
LinkedIn
WhatsApp
ಮುಂದಿನ ವರ್ಷದಿಂದ ಮಕ್ಕಳಿಗೆ ಸೈಕಲನ್ನು ವಿತರಿಸುತ್ತೇವೆ; ಮಧು ಬಂಗಾರಪ್ಪ
ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ (Cycle) ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದ್ದಾರೆ

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ (Ravikumar) ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ (BJP Government) ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.

1-8ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿದ್ದ ಮೊಟ್ಟೆ, ಚಿಕ್ಕಿಯನ್ನು ನಮ್ಮ ಸರ್ಕಾರ ಬಂದ್ಮೇಲೆ 9 ಮತ್ತು 10ನೇ ತರಗತಿಗೂ ವಿಸ್ತರಿಸಿದ್ದೇವೆ. ಕಳೆದ ಸರ್ಕಾರದ ಅವಧಿಯಲ್ಲಿ ಸಮವಸ್ತ್ರ ಖರೀದಿಯಲ್ಲಿ ಕ್ವಾಲಿಟಿ ಸಮಸ್ಯೆ ಆಗಿದೆ. ಹಾಗಾಗಿ ಒಪನ್ ಟೆಂಡರ್ ಮೂಲಕ ಸಮವಸ್ತ್ರ ಖರೀದಿ ಆಗುತ್ತದೆ. ಈ ವರ್ಷದ ಟೆಂಡರ್ ಪ್ರಕ್ರಿಯೆ ಮುಗಿದು ಹೋಗಿದೆ. ಮುಂದಿನ ವರ್ಷದಿಂದ ಉತ್ತಮ ಕ್ವಾಲಿಟಿ ಸಮವಸ್ತ್ರ ನೀಡಲು ಕ್ರಮವಹಿಸುತ್ತೇವೆ ಎಂದು ಹೇಳಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist