ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ 20 ಸೀಟುಗಳನ್ನು ನಾವು ಗೆಲ್ಲುತ್ತೆವೆ: ಡಿಸಿಎಂ ಡಿಕೆ ಶಿವಕುಮಾರ್

Twitter
Facebook
LinkedIn
WhatsApp
ರಾಜ್ಯದಲ್ಲಿ 20 ಸೀಟುಗಳನ್ನು ನಾವು ಗೆಲ್ಲುತ್ತೆವೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ರಾಮಮಂದಿರ ಹವಾ, ಮೋದಿ ಹವಾ ಇಲ್ಲ. ನಾವು ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಇದು ಸಾಬೀತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಕೆಪಿಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆದ ಗ್ಯಾರಂಟಿ ಸಮಿತಿಗಳ ಅಧ್ಯಕ್ಷ, ‌ಉಪಾಧ್ಯಕ್ಷ ಹಾಗೂ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿನಲ್ಲಿ ಶಿವ ಇದ್ದಾನೆ, ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದಾನೆ. ನಾವುಗಳು ಕೂಡಾ ಹಿಂದೂಗಳು ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸೂಚಿಸಿದರು. ಗ್ಯಾರಂಟಿಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ, ಮನೆ ಮನೆಗೆ ಹೋಗಬೇಕು. ತಂಡ‌ ಮಾಡಿ ಹೋಗಬೇಕು. ಓಟರ್ ಲಿಸ್ಟ್ ತಗೊಂಡು ಮನೆ ಮನೆಗೆ ತೆರಳಬೇಕು. ಕಮಲ ಕೆರೆಯಲ್ಲಿ ಚೆಂದ, ತೆನೆ ಹೊಲದಲ್ಲಿ ಇದ್ದರೆ ಈ ದಾನ ಧರ್ಮ‌ ಮಾಡುವ ಕೈ ಅಧಿಕಾರದಲ್ಲಿದ್ದರೆ ಒಳ್ಳೆಯದು ಎಂದರು.

ಐದು ಗ್ಯಾರಂಟಿ ಶಕ್ತಿಯಿಂದ ಜನ ತೆನೆ ಎತ್ತಿ ಬಿಸಾಕಿದ್ದಾರೆ. ಸ್ವಾಭಿಮಾನ‌ ಬಿಡಬೇಕು.‌ ನಾವು ಮೊದಲು ಕಾರ್ಯಕರ್ತರಾಗಿದ್ದೇವೆ. ಪಂಚಾಯತ್ ನಲ್ಲಿ ಲೀಡ್ ಕೊಡಿಸುವ ಕೆಲಸ ಮಾಡಬೇಕು. ಐಡಿ ಕಾರ್ಡ್, ಫೋಟೋ ಅಪ್ ಲೋಡ್ ಮಾಡಿ ಐಡಿ ಹಾಕಿ ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ಮನವರಿಕೆ ಮಾಡಿ ಎಂದು ಸೂಚಿಸಿದರು.

ಮೋದಿ ಗಾಳಿನೂ ಇಲ್ಲ. ರಾಮಂದಿರ ಗಾಳಿನೂ ಇಲ್ಲ. ಅದು ನಮ್ಮ ಸಮೀಕ್ಷೆಯಲ್ಲಿ ಗೊತ್ತಾಗಿದೆ‌. ರಾಜ್ಯದಲ್ಲಿ 20 ಸೀಟುಗಳನ್ನು ನಾವು ಗೆಲ್ಲುತ್ತಿದ್ದೇವೆ ಎಂದು‌ ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷೇತರ ಸ್ಪರ್ಧೆ ಮಾಡಲ್ಲ: ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ

ಲೋಕಸಭಾ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಅದರಂತೆ, ಜೆಡಿಎಸ್​ ಪಕ್ಷಕ್ಕೆ ಹಾಸನ, ಮಂಡ್ಯ ಕ್ಷೇತ್ರಗಳ ಜೊತೆಗೆ ಇದೀಗ ಕೋಲಾರ (Kolar Lok Sabha Constituency) ಕ್ಷೇತ್ರವನ್ನೂ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ. ಇದರಿಂದಾಗಿ ಹಾಲಿ ಸಂಸದ ಎಸ್ ಮುನಿಸ್ವಾಮಿ (S Muniswamy) ಅವರಿಗೆ ಟಿಕೆಟ್ ಕೈತಪ್ಪಿದೆ. ಈ ಬಗ್ಗೆ ದೆಹಲಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದು, ತಾನು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ. ಹೈಕಮಾಂಡ್ ನಾಯಕರ ನಿರ್ಧಾರವನ್ನು ನಾನು ಒಪ್ಪಲೇಬೇಕಿದೆ. ಅನೇಕ ನಾಯಕರು ಪಕ್ಷಕ್ಕೆ ತ್ಯಾಗ ಮಾಡಿದ್ದಾರೆ. ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆಗಬೇಕು. ಹೀಗಾಗಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಾಗಿದೆ. ನನ್ನನ್ನು ಏನು ಮಾಡಬೇಕೆಂದು ಪಕ್ಷ ನಿರ್ಧಾರ ಮಾಡಲಿದೆ. ಕೋಲಾರದ ಸದ್ಯದ ಪರಿಸ್ಥಿತಿಯನ್ನು ದೇವೇಗೌಡರಿಗೆ ವಿವರಿಸಿದ್ದೇನೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ