ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Weather Alert : ಕರಾವಳಿಯಲ್ಲಿ ಹೆಚ್ಚುತ್ತಿದೆ ಬಿಸಿಲ ಝಳಕ್; ಇಲ್ಲಿದೆ ಮುಂದಿನ ದಿನದ ಹವಾಮಾನ ವರದಿ.!

Twitter
Facebook
LinkedIn
WhatsApp
Weather Alert : ಕರಾವಳಿಯಲ್ಲಿ ಹೆಚ್ಚುತ್ತಿದೆ ಬಿಸಿಲ ಝಳಕ್; ಇಲ್ಲಿದೆ ಮುಂದಿನ ದಿನದ ಹವಾಮಾನ ವರದಿ.!

ಮುಂದಿನ 48 ಗಂಟೆಯೂ ರಾಜ್ಯಾದ್ಯಂತ ಶುಷ್ಕ ವಾತಾವರಣ  ಇರಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಲ್ಲಿ ಗಾಳಿಯು ಬಿರುಸಾಗಿ ಬೀಸಲಿದೆ. ಕರಾವಳಿಯಲ್ಲಿ ಕನಿಷ್ಠ ತಾಪಮಾನ ಏರಿಕೆ ಆಗಲಿದ್ದು, ಬಿಸಿಲ ಧಗೆ ಹೆಚ್ಚಿರಲಿದೆ.

ರಾಜ್ಯದಲ್ಲಿ ಭಾನುವಾರವೂ ಒಣ ಹವೆ ಮುಂದುವರಿದಿತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಕನಿಷ್ಠ ಉಷ್ಣಾಂಶ 14.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿತ್ತು.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ