ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Weather Report: ಮಾರ್ಚ್​ನಲ್ಲಿ ಬಾರದ ಮಳೆ; ರಾಜ್ಯದ ಹಲವೆಡೆ ತಾಪಮಾನ ಏರಿಕೆ ಸಾಧ್ಯತೆ..!

Twitter
Facebook
LinkedIn
WhatsApp
Weather Report: ಮಾರ್ಚ್​ನಲ್ಲಿ ಬಾರದ ಮಳೆ; ರಾಜ್ಯದ ಹಲವೆಡೆ ತಾಪಮಾನ ಏರಿಕೆ ಸಾಧ್ಯತೆ..!

Weather Report:ದೇಶಾದ್ಯಂತ ಲೋಕಸಭಾ‌ ಚುನಾವಣಾ (Lok Sabha Election) ಅಖಾಡ ರಂಗೇರುತ್ತಿದೆ. ಮೊದಲ ಹಂತದ ಮತದಾನ ಏಪ್ರೀಲ್ 19 ರಂದು ನಡೆಯಲಿದ್ದು ಭರ್ತಿ ಎರಡು ತಿಂಗಳಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಈ ಮಧ್ಯೆ ಚುನಾವಣಾ ಆಯೋಗಕ್ಕೆ‌ ಭಾರತೀಯ ಹವಾಮಾನ ಇಲಾಖೆ (India Meteorological Department) ಬಿರು ಬಿಸಿಗಾಳಿಯ ಎಚ್ಚರಿಕೆ‌ ನೀಡಿದೆ. ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಸಾರ್ವತ್ರಿಕ ಚುನಾವಣೆ ಪ್ರಚಾರಕ್ಕೆ ತೀವ್ರ ಬಿಸಿಗಾಳಿ ಮಾರಕವಾಗಬಹುದು ಎಂದು ಚುನಾವಣಾ ಆಯೋಗಕ್ಕೆ‌ ಹವಮಾನ ಇಲಾಖೆ‌ ಮುನ್ಸೂಚನೆ‌ ನೀಡಿದೆ. ಏಪ್ರಿಲ್ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ (Summer) ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ.

ಕರ್ನಾಟಕವು ಏಪ್ರಿಲ್​ನಲ್ಲಿ ಸಾಮಾನ್ಯದ 1 ರಿಂದ 3 ದಿನಗಳ ಬದಲು 2 ರಿಂದ 8 ದಿನ ಉಷ್ಣ ಅಲೆಯನ್ನು ಅನುಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲು ಸೀಮೆಯ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆ ಬೀಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ದೇಶಾದ್ಯಂತ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಎಚ್ವರಿಕೆ ವಹಿಸುವಂತೆ ಸೂಚನೆ‌‌ ನೀಡಿದೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಇತ್ತೀಚಿನ ವರದಿ ಪ್ರಕಾರ ಏಪ್ರಿಲ್ ಮತ್ತು ಜೂನ್ ನಡುವೆ ದೇಶದ ಹಲವೆಡೆ ತೀವ್ರ ಶಾಖ ಸೃಷಿಯಾಗಲಿದೆ, ಈ ಸಮಯದಲ್ಲಿ ಶಾಖದ ಅಲೆಯು ಸುಮಾರು 10 ರಿಂದ 20 ದಿನಗಳವರೆಗೆ ಇರುತ್ತದೆ. ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್‌ಗಢ, ಆಂಧ್ರಪ್ರದೇಶದಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮಗಳನ್ನು ಕಾಣಬಹುದು ಎಂದು ಎಚ್ಚರಿಕೆ‌ ನೀಡಿದೆ.

ಭಾರತದಲ್ಲಿ ಏಪ್ರಿಲ್ 19 ಮತ್ತು ಜೂನ್ 1 ರ ನಡುವೆ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಮಧ್ಯಾಹ್ನದ ಸಮಯದಲ್ಲಿ ಸಾರ್ವಜನಿಕ‌ ಸಮಾವೇಶ ಹಾಗೂ ರೋಡ್ ಶೋ ಪ್ರಚಾರ ಮಾಡುವುದನ್ನು ರಾಜಕೀಯ ಪಕ್ಷಗಳು ಮೊಟಕುಗೊಳಿಸಬೇಕಾಗುತ್ತೆ. ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಚುನಾವಣೆ ಆಯೋಗವೇ ಸಮಾವೇಶ, ರೋಡ್ ಶೋಗಳಿಗೆ ಪ್ರಚಾರದ ಸಮಯ ನಿಗದಿ ಮಾಡಿದರೂ ಅಚ್ವರಿಯಿಲ್ಲ.

ಮಾರ್ಚ್​ನಲ್ಲಿ ಬಾರದ ಮಳೆ

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಾರ್ಚ್​​ ತಿಂಗಳ ಮಧ್ಯಭಾಗದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿತ್ತು. ಆದರೆ ಬೆಳಗಾವಿ, ಕೊಡಗು ಮತ್ತು ವಿಜಯಪುರದ ಕೆಲ ಭಾಗಗಳನ್ನು ಹೊರತುಪಡಿಸಿ, ಉಳಿದಡೆ ಮಳೆಯಾಗಿಲ್ಲ. ಬೆಂಗಳೂರಿನಲ್ಲಿಯೇ ಮಾರ್ಚ್​ ತಿಂಗಳಲ್ಲಿ 14.7 ಮಿಮೀನಷ್ಟು ಮಳೆಯಾಗಲಿದೆ ಎಂಬ ವರದಿಯಾಗಲಿದೆ ಎಂಬ ವರದಿಯಿತ್ತು. ಆದರೆ ಇಂದು ಹನಿಯೂ ಮಳೆ ಬೀಳಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist