ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Weather Today: ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; ದೆಹಲಿ, ಪಂಜಾಬ್​ನಲ್ಲಿ ಮಳೆ ಸಾಧ್ಯತೆ

Twitter
Facebook
LinkedIn
WhatsApp
PTI1 7 2017 000189A

ನವದೆಹಲಿ: ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು (ಜನವರಿ 20) ಲಘು ಮಳೆಯಾಗಲಿದೆ (Rainfall) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಮುಂದಿನ 48 ಗಂಟೆಗಳ ಕಾಲ ಹಿಮಾಚಲ ಪ್ರದೇಶದ (Himachal Pradesh) ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ (Snowfall) ಮತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಜನವರಿ 22ರವರೆಗೆ ಲಘುವಾಗಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಜನವರಿ 23-26ರ ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಜನವರಿ 23ರಿಂದ 25ರವರೆಗೆ ಮಳೆ ಬೀಳುವ ನಿರೀಕ್ಷೆಯಿದೆ.

ಒಡಿಶಾ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದ ಹಲವು ಪ್ರದೇಶಗಳಲ್ಲಿ ಜನವರಿ 23ರ ಅವಧಿಯಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ. ವಾಯುವ್ಯ ಭಾರತದ ಸೀವ್ರಾಲ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್​ಗೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

 

ಮುಂದಿನ ವಾರ 5 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. IMD ಪ್ರಕಾರ, ಹಿಮಾಚಲ ಪ್ರದೇಶವು ಜನವರಿ 23ರಿಂದ 26ರವರೆಗೆ ಭಾರೀ ಹಿಮಪಾತ ಮತ್ತು ಮಳೆಗೆ ಸಾಕ್ಷಿಯಾಗಲಿದೆ. ಲಾಹೌಲ್-ಸ್ಪಿತಿ, ಕುಲು, ಕಿನ್ನೌರ್ ಮತ್ತು ಚಂಬಾದ 3ರಿಂದ 4 ಜಿಲ್ಲೆಗಳಲ್ಲಿ 5 ಸೆಂ.ಮೀ ಹಿಮಪಾತ ದಾಖಲಾಗಿದೆ.

“ಎಲ್ಲ ರೀತಿಯ ಹವಾಮಾನ ಎಚ್ಚರಿಕೆಗೆ ಸರ್ಕಾರ ಸಿದ್ಧವಾಗಿದೆ. ಭಾರೀ ಹಿಮದ ನಡುವೆ ನಿರ್ಬಂಧಿಸಲಾದ ರಸ್ತೆಗಳನ್ನು ತೆರವುಗೊಳಿಸಲು ತಮ್ಮ ಹಿಮ ತೆರವು ಕಾರ್ಯಾಚರಣೆಯೊಂದಿಗೆ ಸಿದ್ಧರಾಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ