ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನು ಮತ್ತೊಮ್ಮೆ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಡುತ್ತೇನೆ, ಏನಿವಾಗ? ಮಿಚೆಲ್‌ ಮಾರ್ಷ್..!

Twitter
Facebook
LinkedIn
WhatsApp
ನಾನು ಮತ್ತೊಮ್ಮೆ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಡುತ್ತೇನೆ, ಏನಿವಾಗ? ಮಿಚೆಲ್‌ ಮಾರ್ಷ್..!

ಸಿಡ್ನಿ: ಗೆದ್ದಿದ್ದಕ್ಕೆ, ಗಳಿಸಿದ್ದಕ್ಕೆ ಗೌರವ ನೀಡಬೇಕು ಎಂಬ ಮಾತಿದೆ. ಆದರೆ, ಭಾರತದ ವಿರುದ್ಧ ಗೆದ್ದ ವಿಶ್ವಕಪ್‌ (ICC World Cup 2023) ಟ್ರೋಫಿಯ ಮೇಲೆ ಕಾಲಿಟ್ಟು ದುರಹಂಕಾರ ಮೆರೆದಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಈಗ ಮತ್ತೊಂದು ಉದ್ಧಟತನ ಹೇಳಿಕೆ ನೀಡಿದ್ದಾರೆ. “ನಾನು ಮತ್ತೆ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಡುತ್ತೇನೆ, ಏನಿವಾಗ” ಎಂದು ಹೇಳಿಕೆ ನೀಡುವ ಮೂಲಕ ಮಿಚೆಲ್‌ ಮಾರ್ಷ್‌ (Mitchell Marsh) ಅಹಂಕಾರ ಪ್ರದರ್ಶಿಸಿದ್ದಾರೆ. ಇದರ ಕುರಿತು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮಿಚೆಲ್‌ ಮಾರ್ಷ್‌, “ನಾನು ಮತ್ತೊಮ್ಮೆ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಡುತ್ತೇನೆ. ಹಾಗಂತ, ನಾನು ವಿಶ್ವಕಪ್‌ ಟ್ರೋಫಿಗೆ ಅಗೌರವ ತೋರಿದೆ ಎಂದು ಅರ್ಥವಲ್ಲ. ಟ್ರೋಫಿ ಮೇಲೆ ಕಾಲಿಟ್ಟಿರುವ ಸಂಗತಿಯನ್ನು ನಾನೇನು ಗಂಭೀರವಾಗಿ ಪರಿಗಣಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಷಯಗಳ ಬಗ್ಗೆಯೂ ನಾನು ಹೆಚ್ಚು ಗಮನ ಹರಿಸಿಲ್ಲ. ಸಾಮಾಜಿಕ ಜಾಲತಾಣಗಳ ಟೀಕೆಗಳ ಬಗ್ಗೆ ಎಲ್ಲರೂ ನನಗೆ ಹೇಳಿದ್ದಾರೆ. ಆದರೆ, ನಾನು ಮತ್ತೊಮ್ಮೆ ವಿಶ್ವಕಪ್‌ ಮೇಲೆ ಕಾಲಿಡುತ್ತೇನೆ. ಅದೊಂದು ಸಂಭ್ರಮಾಚರಣೆ ಅಷ್ಟೇ” ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದ ಕೆಲವೇ ಗಂಟೆಗಳ ನಂತರ ಮಿಚೆಲ್‌ ಮಾರ್ಷ್‌ ಅವರು ಟ್ರೋಫಿ ಮೇಲೆ ಕಾಲಿಟ್ಟ ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ನವೆಂಬರ್ 19 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಆತಿಥೇಯ ಭಾರತವನ್ನು ಎದುರಿಸಿತು. ಪಂದ್ಯ ಗೆದ್ದ ಬಳಿಕ ಆಸ್ಟ್ರೇಲಿಯಾ ತಂಡದ ಆಟಗಾರರು ಆರಾಮವಾಗಿ ಕುಳಿತು ಪರಸ್ಪರ ಮಾತನಾಡುತ್ತಿದ್ದ ಹೋಟೆಲ್ ಕೋಣೆಯಿಂದ ಈ ಫೋಟೊ ಶೇರ್ ಮಾಡಲಾಗಿದೆ ಎಂದು ಹೇಳಲಾಗಿತ್ತು.

ಮಾರ್ಷ್ ಅವರು ಚಿನ್ನದ ಟ್ರೋಫಿಯ ಮೇಲೆ ತಮ್ಮ ಎರಡೂ ಕಾಲುಗಳನ್ನು ವಿಶ್ರಾಂತಿ ಪಡೆಯುತ್ತಿದ್ದರು. ಚಿತ್ರ ವೈರಲ್ ಆದ ಕೂಡಲೇ, ಟ್ರೋಫಿಗೆ ‘ಅಗೌರವ’ ತೋರಿದ್ದಕ್ಕಾಗಿ ಜನರು ಅವರ ವಿರುದ್ಧ ಬೈಗುಳಗಳನ್ನು ಪ್ರಾರಂಭಿಸಿದರು. ವಿಶ್ವಕಪ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ ಅನೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಬೇಸರ ಮೂಡಿಸಿದ್ದರು.

ಆದಾಗ್ಯೂ ಗೆದ್ದ ಕಪ್​ಗೆ ಸೂಕ್ತ ಮರ್ಯಾದೆ ಕೊಡದ ಆ ತಂಡದ ಆಟಗಾರರ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಆಸ್ಟ್ರೇಲಿಯಾವು ಕ್ರಿಕೆಟ್​​ನ ಅತಿದೊಡ್ಡ ಟ್ರೋಫಿಯನ್ನು ಗೆದ್ದಿರಬಹುದು, ಆದರೆ ಗೌರವವನ್ನು ಗೆದ್ದಿಲ್ಲ ಕೆಲವರು ಅಭಿಪ್ರಾಯಪಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist