ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಪುಟ್ಟ ಮಗು ಸಾವು!
ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮೂರು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಶಿರಸಿ ನಗರದ ಸಿ.ಪಿ. ಬಜಾರದಲ್ಲಿ ನಡೆದಿದೆ.
ಅನುಶ್ರೀ ರಾಜಶೇಖರ ಶೆಟ್ಟರ್ (2) ಮೃತ ಬಾಲಕಿ. ಈಕೆ ಬಾವಿ ಸಮೀಪ ಆಟವಾಡುತ್ತಿದ್ದ ಮಗು ಆಟವಾಡುತ್ತ ನೇರವಾಗಿ ಬಾವಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಾಯಿ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರಾದ ಶಂಭು ಶೆಂಮಡಿ ಎಂಬವರು ಕೂಡಲೇ ಬಾವಿಗೆ ಇಳಿದು ಮಗುವನ್ನು ಹೊರಕ್ಕೆ ತೆಗೆದಿದ್ದಾರೆ. ಆದರೆ ಆಕೆ ಬಾವಿಯಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ನಗರಠಾಣೆ ಪಿಎಸ್‍ಐ ರಾಜಕುಮಾರ ಉಕ್ಕಲಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ, ಪತಿ ಮೇಲೆ ಅನುಮಾನ
ಬೆಂಗಳೂರು, (ಅಕ್ಟೋಬರ್ 05): ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ (Bengaluru) ಯಲಹಂಕ ಉಪನಗರ 3ನೇ ಹಂತದಲ್ಲಿ ಈ ಘಟನೆ ನಡೆದಿದೆ. ರೇಖಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಮೃತ ಮಹಿಳೆಯ ಪೊಷಕರು ಆಕೆಯ ಪತಿ ಅಭಿರಾಮ್ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಹಣ, ಒಡವೆ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿದೆ.
ಆದರೂ ಪತಿ ಅಭಿರಾಮ್ ಹಾಗೂ ಕುಟುಂಬಸ್ಥರು ರೇಖಾಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ಕೊಟ್ಟು ಬಳಿಕ ದೈಹಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ರೇಖಾ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಿದ್ದಾರೆ ಎಂದು ಆರೋಪಿಸಿದ್ದು, ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಪೊಲೀಸರು PC 302 ಸೆಕ್ಷನ್ ಹಾಗೂ 304B, 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.