ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯದುವೀರ್ ಒಡೆಯರ್ ವಿರುದ್ಧ ಮೈಸೂರು ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಚ್ಚರಿಯ ಅಭ್ಯರ್ಥಿ ಯಾರು?

Twitter
Facebook
LinkedIn
WhatsApp
ಯದುವೀರ್ ಒಡೆಯರ್ ವಿರುದ್ಧ ಮೈಸೂರು ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಚ್ಚರಿಯ ಅಭ್ಯರ್ಥಿ ಯಾರು?

ಮೈಸೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಪ್ರತಿಷ್ಠಿತ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಈ ಬಾರಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಕಳೆದೆರಡು ಬಾರಿ ಗೆಲುವು ಸಾಧಿಸಿದ್ಧ ಸಂಸದ ಪ್ರತಾಪ್ ಸಿಂಹ ಅವರ ಬದಲು ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಅತಿ ಹೆಚ್ಚು ಒಕ್ಕಲಿಗ ಸಮುದಾಯದ ಮತದಾರರನ್ನು ಒಳಗೊಂಡಿರುವ ಕ್ಷೇತ್ರದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರೇ ಮೂರನೇ ಬಾರಿಯೂ ಮತ್ತೊಮ್ಮೆ ಚುನಾವಣೆ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದರು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ 31 ವರ್ಷದ ರಾಜ ಯದುವೀರ್‌ ಒಡೆಯರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಈ ಕ್ಷೇತ್ರದಲ್ಲಿ ಒಡೆಯರ್‌ಗೆ ವರದಾನವಾಗಬಹುದು. 1951ರಿಂದ 17 ಬಾರಿ ಲೋಕಸಭಾ ಚುನಾವಣೆ ನಡೆದಿದ್ದು, ಜೆಡಿಎಸ್ ಈ ಕ್ಷೇತ್ರದಲ್ಲಿ ಒಮ್ಮೆಯೂ ಗೆದ್ದಿಲ್ಲ. ಮೊದಲ ಬಾರಿ ಕಿಸಾನ್ ಮಜ್ದೂರ್ ಪಕ್ಷ ಗೆಲುವು ಸಾಧಿಸಿತ್ತು. 12 ಬಾರಿ ಕಾಂಗ್ರೆಸ್ ಪಾರ್ಟಿ ಗೆಲುವು ಸಾಧಿಸಿದೆ, ಬಿಜೆಪಿ ಈ ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದೆ. 1971, 1977ರಲ್ಲಿ ಎಂ ಡಿ ತುಳಸಿದಾಸ್, 1980ರಲ್ಲಿ ಎಂ ರಾಜಶೇಖರಮೂರ್ತಿ, 1984 ಹಾಗು 1989ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, 1991ರಲ್ಲಿ ಚಂದ್ರಪ್ರಭಾ ಅರಸ್, 1996ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, 1998ರಲ್ಲಿ ಸಿ ಹೆಚ್ ವಿಜಯಶಂಕರ್, 1999ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, 2004ರಲ್ಲಿ ಸಿ ಹೆಚ್ ವಿಜಯಶಂಕರ್, 2009 ಹೆಚ್ ವಿಶ್ವನಾಥ್, 2014 ಹಾಗು 2019ರಲ್ಲಿ ಪ್ರತಾಪ್ ಸಿಂಹ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದಾರೆ. 2 ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರೆ, ಕೇವಲ 1 ಕ್ಷೇತ್ರದಲ್ಲಷ್ಟೇ ಬಿಜೆಪಿ ಶಾಸಕರಿದ್ದಾರೆ. ಇದು ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು ಜಿಲ್ಲೆಯ ಕೃಷ್ಣರಾಜ, ಚಾಮರಾಜ, ಪಿರಿಯಾಪಟ್ಟಣ, ನರಸಿಂಹರಾಜ ಚಾಮುಂಡೇಶ್ವರಿ, ಹುಣಸೂರು ಹಾಗೂ ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ, ಪಿರಿಯಾಪಟ್ಟಣ, ನರಸಿಂಹರಾಜ, ಮಡಿಕೇರಿ, ವಿರಾಜಪೇಟೆಯಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಜಯ ಸಾಧಿಸಿದೆ. ಚಾಮುಂಡೇಶ್ವರಿ ಹಾಗೂ ಹುಣಸೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆದ್ದಿದೆ. ಬಿಜೆಪಿ ಗೆದ್ದಿರುವುದು ಕೃಷ್ಣರಾಜ ಕ್ಷೇತ್ರದಲ್ಲಿ ಮಾತ್ರ. ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್‌ ಬಲ ಹೆಚ್ಚಾಗಿ ಚೈತನ್ಯ ಮೂಡಿದ್ದರೆ ಬಿಜೆಪಿಯು ಒಂದು ಸ್ಥಾನಕ್ಕೆ ಕುಸಿತ ಕಂಡು ಶೋಚನೀಯ ಸ್ಥಿತಿ ತಲುಪಿದೆ. ಇದು ಕಾಂಗ್ರೆಸ್ ಗೆ ಲಾಭವಾಗಲಿದೆ ಎನ್ನೋದು ಕಾಂಗ್ರೆಸ್‌ನವರ ಲೆಕ್ಕಾಚಾರವಾಗಿದೆ.

 

ಕಳೆದೆರಡು ಬಾರಿ ಸಂಸದ ಪ್ರತಾಪ್ ಸಿಂಹಗೆ ಗೆಲುವು

2014ರಲ್ಲಿ ಪತ್ರಕರ್ತನಾಗಿ ಮೊದಲ ಬಾರಿ ಚುನಾವಣಾ ಕಣಕ್ಕೆ ಧುಮುಕಿದ ಸಂಸದ ಪ್ರತಾಪ್ ಸಿಂಹ ಮೊದಲ ಪ್ರಯತ್ನದಲ್ಲೇ ಹಾಲಿ ಸಂಸದ ಕಾಂಗ್ರೆಸ್ ನ ಹೆಚ್ ವಿಶ್ವನಾಥ್ ವಿರುದ್ಧ 31608 ಮತಗಳಿಂದ ಗೆಲುವು ಸಾಧಿಸಿದರು, ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ 5,03,908‌ ಮತಗಳನ್ನು ಪಡೆದರೆ ಸಂಸದನಾಗಿದ್ದ ಹೆಚ್ ವಿಶ್ವನಾಥ್ 4,72,300 ಮತಗಳನ್ನು ಪಡೆದು ಪ್ರತಾಪ್ ಸಿಂಹ ಎದುರು ಸೋಲು ಅನುಭವಿಸಿದರು.

ಇನ್ನೂ 2019ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಹೋಗಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಣಕ್ಕೆ ಇಳಿದಿದ್ದ ಮಾಜಿ ಸಂಸದ ಸಿ ಹೆಚ್ ವಿಜಯಶಂಕರ್ ವಿರುದ್ಧ ಬರೋಬ್ಬರಿ 1,38,647 ಮತಗಳ ಬಾರಿ ಅಂತರದಿಂದ ಪ್ರತಾಪ್ ಸಿಂಹ ಗೆಲುವು ಸಾಧಿಸಿದರು‌. ಸಂಸದ ಪ್ರತಾಪ್ ಸಿಂಹ 688974 ಮತ ಪಡೆದರೇ, ಸಿ ಹೆಚ್ ವಿಜಯಶಂಕರ್ 550327 ಮತ ಪಡೆದರು.

ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ದಂಡು

ರಾಜ್ಯದಲ್ಲಿ ಆಡಳಿತ ಪಕ್ಷವಾಗಿ ಕಾಂಗ್ರೆಸ್ ಇದೆ. ಹೀಗಾಗಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಈ ಒಂದೇ ಕ್ಷೇತ್ರಕ್ಕೆ ಕಾಂಗ್ರೆಸ್ ನಲ್ಲಿ 12 ರಿಂದ 14 ಮಂದಿ ಆಕಾಂಕ್ಷಿಗಳಿದ್ದಾರೆ.ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜಯಕುಮಾರ್‌, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಅಧ್ಯಕ್ಷ ಸಿ ಬಸವೇಗೌಡ, ಗೋಪಾಲಗೌಡ ಆಸ್ಪತ್ರೆಯ ವೈದ್ಯ ಡಾ ಸುಶ್ರುತ್‌ ಗೌಡ, ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ವಕೀಲ ಚಂದ್ರಮೌಳಿ, ಎಂ ಕೆ ಸೋಮಶೇಖರ್, ಮುಖಂಡರಾದ ಜೆ ಜೆ ಆನಂದ್, ಗುರುಮಲ್ಲೇಶ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಸೂರಜ್ ಹೆಗಡೆ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮಾಜದ ಮತಗಳೇ ಹೆಚ್ಚಿರುವ ಕಾರಣದಿಂದಾಗಿ ಒಕ್ಕಲಿಗ ಸಮಾಜದ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಚಿಂತನೆ ಮಾಡುತ್ತಿದೆ. ಇತ್ತ ಜೆಡಿಎಸ್ ಕೂಡ ಮೈಸೂರು ಕೊಡಗು ಕ್ಷೇತ್ರಕ್ಕೆ ಮಾಜಿ ಸಚಿವ ಸಾ ರಾ ಮಹೇಶ್ ಅವರನ್ನು ಕಣಕ್ಕೆ ಇಳಿಸಬೇಕು ಎಂದು ಪ್ಲಾನ್ ಮಾಡಿದೆ. ಆದರೆ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಂಸದ ಇರುವ ಕಾರಣಕ್ಕೆ ಜೆಡಿಎಸ್ ಪಕ್ಷ ಮೈತ್ರಿಯಿಂದಾಗಿ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಪಡೆಯಲು ಮುಂದಾಗಿಲ್ಲ. ಇತ್ತ ಬಿಜೆಪಿಯಲ್ಲೂ ಕೂಡ ಎರಡು ಬಾರಿ ಗೆಲುವು ಸಾಧಿಸಿರುವ ಪ್ರತಾಪ್ ಸಿಂಹರನ್ನು ಬಿಟ್ಟು ಹೊಸ ಮುಖಕ್ಕೆ ಮಣೆ ಹಾಕಿ, ಅಚ್ಚರಿಯ ಅಭ್ಯರ್ಥಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

ಒಟ್ಟಿನಲ್ಲಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರಿನಲ್ಲಿ ಈ ಬಾರಿ ಯಾರು ಗೆಲ್ಲುತ್ತಾರೆ ಎನ್ನೋದು ತೀವ್ರ ಕುತೂಹಲ ಕೆರಳಿಸಿದೆ‌. ನಾಡಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಾಮುಂಡಿಬೆಟ್ಟ, ಜಗತ್ಪ್ರಸಿದ್ಧ ಅರಮನೆ, ಚಾಮರಾಜೇಂದ್ರ ಮೃಗಾಲಯ, ಪಿರಿಯಾಪಟ್ಟಣದ ಬೈಲುಕುಪ್ಪೆ ಬಳಿಯಿರುವ ಗೋಲ್ಡನ್ ಟೆಂಪಲ್, ಕೊಡಗಿನ ತಲಕಾವೇರಿ, ಭಾಗಮಂಡಲ, ನಾಗರಹೊಳೆ ಅಭಯಾರಣ್ಯ ಮೊದಲಾದ ಸ್ಥಳಗಳು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವುದು ಮತ್ತೊಂದು ವಿಶೇಷವಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ