ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪವನ್ ಕಲ್ಯಾಣ್ ಪಕ್ಷಕ್ಕೆ ಎಂಟ್ರಿ ಕೊಡ್ತಾರಾ ನಟಿ ಅನುಷ್ಕಾ ಶೆಟ್ಟಿ.?

Twitter
Facebook
LinkedIn
WhatsApp
ಪವನ್ ಕಲ್ಯಾಣ್ ಪಕ್ಷಕ್ಕೆ ಎಂಟ್ರಿ ಕೊಡ್ತಾರಾ ನಟಿ ಅನುಷ್ಕಾ ಶೆಟ್ಟಿ.?

ಆಂಧ್ರಪ್ರದೇಶದಲ್ಲಿ ರಾಜಕೀಯ ಅಖಾಡ ರಂಗೇರಿದೆ. ಟಿಡಿಪಿ, ಜನಸೇನೆ ಹಾಗೂ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸಿದ್ದಾರೆ. ಈ ಬೆಳವಣಿಗೆ ನಡುವೆ ನಟಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ.

ಟಾಲಿವುಡ್ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈ ಚೆಲುವೆ ಸದ್ಯ ಸಿನಿಮಾಗಳ ಆಯ್ಕೆಯನ್ನು ಭಾರೀ ಮುಂಜಾಗೃತಿ ವಹಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳ ಮೂಲಕ ಜನರ ಮನಗೆದ್ದ ಅನುಷ್ಕಾ ಇದೀಗ ಜನಸೇವೆ ಮಾಡಲು ರೆಡಿಯಾಗಿದ್ದಾರೆ ಎನ್ನಲಾಗ್ತಿದೆ.

ಸಿನಿಮಾ ಲೋಕದಲ್ಲಿ ಮಿಂಚಿದ ಕನ್ನಡತಿ ಅನುಷ್ಕಾ ಶೆಟ್ಟಿ, ರಾಜಕೀಯದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರಂತೆ. ಟಾಲಿವುಡ್ ಪವರ್​ ಸ್ಟಾರ್ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ಮೂಲಕ ರಾಜಕೀಯದ ಅಖಾಡಕ್ಕೆ ಧುಮುಕಲಿದ್ದಾರಂತೆ.

ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ನಟಿ ಅನುಷ್ಕಾ ಶೆಟ್ಟಿ ಪವನ್ ಕಲ್ಯಾಣ್ ಅವರ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಇತ್ತೀಚಿಗೆ ನಟಿ ಅನುಷ್ಕಾ ಶೆಟ್ಟಿ ಜನಸೇನಾ ನಾಯಕರ ಸಂಪರ್ಕದಲ್ಲೂ ಇದ್ದಾರಂತೆ. ರಾಜಕೀಯ ಎಂಟ್ರಿಗೆ ಭರ್ಜರಿ ತಯಾರಿ ನಡೆಸಿದ್ದಾರೆ ಎನ್ನಲಾಗ್ತಿದೆ. ಆದ್ರೆ ನಟಿ ಅನುಷ್ಕಾ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.ಚಿತ್ತೂರು ಜಿಲ್ಲೆ ಎಪಿಯಲ್ಲಿ ಸಚಿವೆ ಹಾಗೂ ನಟಿ ರೋಜಾ (ವೈಎಸ್‌ಆರ್‌ಸಿಪಿ) ಅವರಿಗೆ ಸ್ಪರ್ಧಿಸಲು ಅನುಷ್ಕಾ ಅವರನ್ನು ಕಣಕ್ಕಿಳಿಸಲು ಜನ ಸೇನಾ ಮುಂದಾಗಿದೆ ಎನ್ನಲಾಗಿದೆ.

 

ಅನುಷ್ಕಾ ಕರ್ನಾಟಕದ ಮಂಗಳೂರಿನವರಾಗಿದ್ದಾರೆ. ಆದರೆ ಅವರು ಎಂದಿಗೂ ಕನ್ನಡ ಚಿತ್ರದಲ್ಲಿ ನಟಿಸಿಲ್ಲ. 2005 ರಲ್ಲಿ ನಾಗಾರ್ಜುನ, ಆಯೇಷಾ ಟಾಕಿಯಾ ನಟಿಸಿದ ಪುರಿ ಜಗನ್ನಾಥ್ ಅವರ ಚಿತ್ರ ಸೂಪರ್‌ ಸಿನಿಮಾ ಮೂಲಕ  ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ರು ನಂತ್ರ ನಟಿ, ವಿಕ್ರಮಾರ್ಕುಡು, ಅರುಂಧತಿ ಮತ್ತು ವೇದಂನಂತಹ ಚಿತ್ರಗಳೊಂದಿಗೆ ತೆಲುಗಿನಲ್ಲಿ ಖ್ಯಾತಿಯನ್ನು ಗಳಿಸಿದರು.

ಬಾಹುಬಲಿ ಸಿನಿಮಾಗಳು ಅನುಷ್ಕಾಗೆ ಒಳ್ಳೆ ಖ್ಯಾತಿಯನ್ನು ತಂದು ಕೊಟ್ಟಿದೆ. ಅದರ ನಂತರ ಗ್ಯಾಪ್ ತೆಗೆದುಕೊಂಡ ನಟಿ ಕೆಲವೇ ಕೆಲವು ಪ್ರಾಜೆಕ್ಟ್​ಗಳಲ್ಲಿ ನಟಿಸಿದ್ದಾರೆ. ಬಾಹುಬಲಿ ನಂತರ ಅವರು ಭಾಗಮತಿ ಮತ್ತು ನಿಷ್ಬ್ದಮ್‌ನಲ್ಲಿ ನಟಿಸಿದ್ದಾರೆ. ಚಿರಂಜೀವಿ ಅವರ ಸೈರಾ ನರಸಿಂಹ ರೆಡ್ಡಿಯಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಇತ್ತೀಚಿನ ಚಿತ್ರ 2023 ರ ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ.

2005 ರಿಂದ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿ ನಟಿಸಿದ ನಂತರ ಸೌತ್ ನಟಿ ಅನುಷ್ಕಾ ಶೆಟ್ಟಿ ಇದೀಗ ಮಲಯಾಳಂನಲ್ಲಿ ಮೊದಲ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ನಟ ರೋಜಿನ್ ಥಾಮಸ್ ಅವರ ಫ್ಯಾಂಟಸಿ ಡ್ರಾಮಾ, ಕತ್ತನಾರ್ – ದಿ ವೈಲ್ಡ್ ಸೋರ್ಸೆರರ್‌ನಲ್ಲಿ ನಟಿಸಲಿದ್ದಾರೆ. ಇದರಲ್ಲಿ ಜಯಸೂರ್ಯ ಮತ್ತು ವಿನೀತ್ ಸಹ ನಟಿಸಿದ್ದಾರೆ. ಇದರ ಜೊತೆ ನಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರ ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist