ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂವರು ಶಾಸಕರೊಡನೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರಾ ನವಜೋತ್ ಸಿಂಗ್..?

Twitter
Facebook
LinkedIn
WhatsApp
ಮೂವರು ಶಾಸಕರೊಡನೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರಾ ನವಜೋತ್ ಸಿಂಗ್..?

ನವಜೋತ್ ಸಿಂಗ್ ಸಿಧು (Navjot Singh Sidhu) ಅವರು ಕಾಂಗ್ರೆಸ್ (Congress) ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಿಪಬ್ಲಿಕ್ ಟಿವಿ ವರದಿ ಪ್ರಕಾರ ಫೆಬ್ರವರಿ 22 ರ ನಂತರ ಸಿಧು ಜೊತೆಗೆ 3 ಕಾಂಗ್ರೆಸ್ ಶಾಸಕರು ಬಿಜೆಪಿ (BJP) ಸೇರಬಹುದು. ಸಿಧು ಅವರಿಗೆ ಯಾವುದೇ ಮಹತ್ವದ ಜವಾಬ್ದಾರಿಗಳನ್ನು ವಹಿಸದ ಕಾರಣ ಪಕ್ಷದ ಹೈಕಮಾಂಡ್‌ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಮರುಪ್ರವೇಶಕ್ಕಾಗಿ ನಾಯಕರನ್ನು ಸಮಾಧಾನಪಡಿಸಲು ಅವರು ಬಿಜೆಪಿಯ ಹಿರಿಯ ನಾಯಕತ್ವದಿಂದ ಸಮಯ ಕೇಳಿದ್ದಾರೆ ಎಂದು ಹೇಳಲಾಗಿದೆ. ಸಿಧು ಅವರು ಪಕ್ಷಕ್ಕೆ ಪ್ರವೇಶಿಸಿದಾಗಿನಿಂದಲೂ ಸ್ಥಳೀಯ ಕಾಂಗ್ರೆಸ್ ಘಟಕದೊಂದಿಗೆ ಗೊಂದಲದ ಸಂಬಂಧವನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭವಿಷ್ಯವೂ ಅತಂತ್ರವಾಗಿದೆ.

ಇತ್ತ ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್  ಮತ್ತು ಅವರ ಮಗ ನಕುಲ್ ನಾಥ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಕೇಳಿ ಬಂದಿದೆ. ಈ ಬಗ್ಗೆ ಕಮಲ್ ನಾಥ್ ಅವರಲ್ಲಿ ಕೇಳಿದಾಗ ಅಂಥದ್ದೇನಾದರೂ ಇದ್ದರೆ ಮೊದಲು ನಿಮಗೇ ತಿಳಿಸುತ್ತೇನೆ ಎಂದು ಮಾಧ್ಯಮದವರಿಗೆ ಹೇಳಿದ್ದಾರೆ.

 

ಗುರುವಾರ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ರೈತರ ಪ್ರತಿಭಟನೆ ವೇಳೆ  ಅಶ್ರುವಾಯು ಶೆಲ್ ದಾಳಿ ಬಗ್ಗೆ ಖಂಡಿಸಿದ ಸಿಧು, ಹೇಡಿತನ ಇದು ಇದು ನಮ್ಮ ಪ್ರಾದೇಶಿಕ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ರಿಮೋಟ್ ಕಂಟ್ರೋಲ್ ಸಿಎಂ ಭಗವಂತ್ ಮಾನ್ /ಗೃಹಸಚಿವರು  ಮೂಕ ಪ್ರೇಕ್ಷಕರಾಗಿದ್ದಾರೆ ಅದು ನಾಚಿಕೆಗೇಡು ಎಂದು  ಆಕ್ರೋಶ ವ್ಯಕ್ತ ಪಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ