ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮದುವೆಯಾಗಿ 19 ದಿನಗಳಲ್ಲೇ ನವವಿವಾಹಿತೆ ಮನೆಯಲ್ಲೇ ನೇಣಿಗೆ ಶರಣು!

Twitter
Facebook
LinkedIn
WhatsApp
ಮದುವೆಯಾಗಿ 19 ದಿನಗಳಲ್ಲೇ ನವವಿವಾಹಿತೆ ಮನೆಯಲ್ಲೇ ನೇಣಿಗೆ ಶರಣು!

ಕಾಸರಗೋಡು : ಕಾಸರಗೋಡಿನಲ್ಲಿ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಕ್ಕಿನಡ್ಕ ಮುಹಮ್ಮದ್ ಮತ್ತು ಬೀಫಾತಿಮಾ ದಂಪತಿಯ ಪುತ್ರಿ ಹಾಗೂ ಉಕ್ಕಿನಡ್ಕ ತಾಜುದ್ದೀನ್ ಎಂಬವರ ಪತ್ನಿ ಉಮೈರಾ ಬಾನು (22) ನೇಣಿಗೆ ಶರಣಾದ ಯುವತಿಯಾಗಿದ್ದಾಳೆ.

ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಉಮೈರಾ ಬಾನು ಪತ್ತೆಯಾಗಿದ್ದಾರೆ. ತಾಜುದ್ದೀನ್ ಮತ್ತು ಉಮೈರಾ ಬಾನು ಪರಸ್ಪರ ಪ್ರೀತಿಸುತ್ತಿದ್ದರು. ತಾಜುದ್ದೀನ್ ಒಂದು ತಿಂಗಳ ಹಿಂದೆ ಗಲ್ಫ್ ನಿಂದ ಬಂದಿದ್ದು 19 ದಿನಗಳ ಹಿಂದೆ ಉಮೈರಾ ಅವರನ್ನು ವಿವಾಹವಾಗಿದ್ದರು. ಉಮೈರಾ ಅವರ ತಂದೆ ಮಹಮ್ಮದ್ ಕರ್ನಾಟಕದವರು. ಮಹಮ್ಮದ್ ಮತ್ತು ಅವರ ಕುಟುಂಬ ನಿನ್ನೆ ಬೆಳಗ್ಗೆ ಕರ್ನಾಟಕಕ್ಕೆ ತೆರಳಿದ್ದರು. ಮನೆಯಲ್ಲಿ ಉಮೈರಾ ಮತ್ತು ತಾಜುದ್ದೀನ್ ಮಾತ್ರ ಇದ್ದರು. ತಾಜುದ್ದೀನ್ ಅವರ ಸಂಬಂಧಿ ಹೊಸ ಮನೆ ಕಟ್ಟುತ್ತಿದ್ದಾರೆ. ತಾಜುದ್ದೀನ್ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸಿಮೆಂಟ್ ಇಳಿಸಲು ಸಂಬಂಧಿಕರ ಮನೆಗೆ ಹೋಗಿದ್ದರು. ತಾಜುದ್ದೀನ್ ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗಿದಾಗ ಬಾಗಿಲನ್ನು ಒಳಗಿನಿಂದ ಚಿಲಕ ಹಾಕಿ ಮುಚ್ಚಲಾಗಿತ್ತು. ಬಾಗಿಲು ಬಡಿದರೂ ತೆರೆಯದೇ ಇದ್ದಾಗ ಬಾಗಿಲು ಒದ್ದು ನೋಡಿದಾಗ ಉಮೈರಾ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಶಾಲನ್ನು ಕತ್ತರಿಸಿ ಕೂಡಲೇ ಉಕ್ಕಿನಡ್ಕ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಬದಿಯಡ್ಕ ಪೊಲೀಸರು ಪಂಚನಾಮೆ ನಡೆಸಿ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜಿಗೆ ತಜ್ಞ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಕೆಲವು ದಿನಗಳಿಂದ ಉಮೈರಾ ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಆಂಟಿಯನ್ನು ಪ್ರೀತಿಸಲು ಹೋಗಿ ಯುವಕನ ಬಿತ್ತು ಹೆಣ..!

ಬೆಂಗಳೂರು: ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಪ್ರಕರಣಕ್ಕೆ ಹಿಂದೆ ಬಿದ್ದ ಖಾಕಿ ಪಡೆ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಂಟಿಯ ಪ್ರೀತಿಸಲು ಹೋಗಿ ಯುವಕ ಹೆಣವಾಗಿ ಹೋಗಿದ್ದಾನೆ.

ಈ ಕೇಸ್​ನಲ್ಲಿ ಮೃತನ ಪ್ರೇಯಸಿಯೇ ಆತನನ್ನು ಕೊಂದಿರುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುಗಳೂರು ಹೊಳೆಯಲ್ಲಿ ಅನಾಮಿಕ ವ್ಯಕ್ತಿಯ ಶವ ಸಿಕ್ಕಿದ್ದು, ಈ ಪ್ರಕರಣ ಆಸುಪಾಸಿನ ಜನರನ್ನು ಆತಂಕಕ್ಕೀಡು ಮಾಡಿತ್ತು. ಆದರೀಗ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದು, ಮೃತ ಯುವಕನನ್ನು ಕೋಲಾರ ಮಾಲೂರು ತಾಲೂಕಿನ ಅಯ್ಯಪ್ಪನಗರದ 28 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಮಾಲೂರು ಸೊನ್ನಾಪುರ ಗ್ರಾಮದ ಸತೀಶ್(30), ಶಶಿ(29), ಶೋಭಾ(28) ಕೊಲೆ ಆರೋಪಿಗಳಾಗಿದ್ದಾರೆ.

ಕಳೆದ ತಿಂಗಳು 26ನೇ ತಾರೀಖು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ವೇಳೆ ಸಮೀಪದ ಮುಗಳೂರು ಬ್ರಿಡ್ಜ್ ತಡೆಗೋಡೆ ಮೇಲೆ ರಕ್ತದ ಕಲೆಗಳಿರುವುದು ಪತ್ತೆಯಾಗಿತ್ತು. ಆದ್ರೆ ಅಂದು ಮೃತನ ಗುರುತು ಪತ್ತೆಯಾಗಿರಲಿಲ್ಲ. ಸರ್ಜಾಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಇದಾದ ಬಳಿಕವೇ ಯುವಕನ ಮರ್ಡರ್ ಕಹಾನಿ ಬಯಲಿಗೆ ಬಂದಿದೆ.

ಮೃತ ಚೇತನ್ ಗಂಡ ಬಿಟ್ಟಿದ್ದ ಮಹಿಳೆ ಜೊತೆ ಸಹಜೀವನ ಆರಂಭಿಸಿದ್ದು, ಕಳೆದ ಎಂಟು ತಿಂಗಳಿಂದ ಇಬ್ಬರೂ ಒಟ್ಟಿಗಿದ್ದರೆನ್ನಲಾಗಿದೆ. ಈ ನಡುವೆ ಚೇತನ್ ಮೂಲಕ ಸತೀಶ್ ಪರಿಚಯವಾಗಿದ್ದು, ಸಿರಿವಂತ ಸತೀಶ್ ಮೇಲೆ ಶೋಭಾ ಕಣ್ಣು ಬಿದ್ದಿದೆ. ಕೆಲವೇ ದಿನಗಳಲ್ಲಿ ಶೋಭಾಗಾಗಿ ಆತ ಲಕ್ಷ ಲಕ್ಷ ಖರ್ಚು ಮಾಡಿದ್ದ. 25 ಲಕ್ಷ ಖರ್ಚು ಮಾಡಿದ್ದ ಆತ ಶೋಭಗಾಗಿ ಬ್ಯೂಟಿ ಪಾರ್ಲರ್ ಆರಂಭ ಮಾಡಿದ್ದ. ಆದರೆ ಇಬ್ಬರ ನಡುವಿನ ಈ ಆಪ್ತತೆಗೆ ಚೇತನ್ ಅಡ್ಡಿಯಾಗಿದ್ದ.

ತಮ್ಮ ಈ ಸಂಬಂಧಕ್ಕೆ ಅಡ್ಡಿಯಾದ ಚೇತನ್​ ಆಟ ಮುಗಿಸಲು ಶೋಭಾ ಪ್ಲಾನ್ ಮಾಡಿದ್ದಾಳೆ. ನಂತರ ಒಂದು ದಿನ ಎಣ್ಣೆ ಪಾರ್ಟಿ ನಡೆದಿದೆ. ಹೊಸಕೋಟೆ ಐಶ್ವರ್ಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಚೇತನ್‍ನನ್ನು ಮಚ್ಚಿನಿಂದ ಹೊಡೆದು ಮುಗಳೂರು ಹೊಳೆಗೆ ಎಸೆದಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಆರೋಪಿ ಶೋಭಾ, ಈ ಬಾರಿ ತನ್ನ ಮಾಸ್ಟರ್ ಪ್ಲಾನ್ ನಿಂದಾಗಿ ಇಬ್ಬರ ಭವಿಷ್ಯ ಹಾಳು ಮಾಡಿದ್ದಾಳೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist