ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Women's Under-19 World Cup: ಶಫಾಲಿ ನೇತೃತ್ವದ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್​

Twitter
Facebook
LinkedIn
WhatsApp
42819 untitled design 2023 01 29t194433377

Women’s Under-19 World Cup: ಸೌತ್ ಆಫ್ರಿಕಾದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ7 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್​ ಅನ್ನು ತನ್ನದಾಗಿಸಿಕೊಂಡಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ತಂಡದ ನಾಯಕಿ ಶಫಾಲಿ ವರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಟೀಮ್ ಇಂಡಿಯಾ ಯುವತಿಯರು ಯಶಸ್ವಿಯಾದರು.

ಮೊದಲ ಓವರ್​ನ ನಾಲ್ಕನೇ ಎಸೆತದಲ್ಲೇ ಲಿಬರ್ಟಿ ಹೀಪ್ (0) ವಿಕೆಟ್ ಪಡೆದು ಟಿಟಾಸ್ ಸಾಧು ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಫಿಯೋನಾ ಹಾಲೆಂಡ್​ (10) ರನ್ನು ಅರ್ಚನಾ ದೇವಿ ಕ್ಲೀನ್ ಬೌಲ್ಡ್ ಮಾಡಿದರು. ಅಷ್ಟೇ ಅಲ್ಲದೆ ಅದೇ ಓವರ್​ನ ಅಂತಿಮ ಎಸೆತದಲ್ಲಿ ಇಂಗ್ಲೆಂಡ್ ನಾಯಕಿ ಗ್ರೇಸ್ ಸ್ಕ್ರಿವೆನ್ಸ್ (4) ಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಅರ್ಚನಾ ಯಶಸ್ವಿಯಾದರು.

ಇತ್ತ ಕೇವಲ 16 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್ ತಂಡಕ್ಕೆ ರಯಾನಾ ಮ್ಯಾಕ್​ಡೊನಾಲ್ಡ್ ಆಸರೆಯಾದರು. ಮಧ್ಯಮ ಕ್ರಮಾಂಕದಲ್ಲಿ 19 ರನ್​ ಬಾರಿಸುವ ಮೂಲಕ ರಯಾನಾ ತಂಡದ ಮೊತ್ತವನ್ನು 50 ರ ಗಡಿದಾಟಿಸಿದರು.

ಆದರೆ ಮತ್ತೊಂದೆಡೆ ಇಂಗ್ಲೆಂಡ್ ಆಟಗಾರ್ತಿಯರ ಪೆವಿಲಿಯನ್ ಪರೇಡ್ ಮುಂದುವರೆದಿತ್ತು. ಪರಿಣಾಮ 17.1 ಓವರ್​ಗಳಲ್ಲಿ ಇಂಗ್ಲೆಂಡ್ ತಂಡ 68 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಟಿಟಾಸ್ ಸಾಧು, ಅರ್ಚನಾ ದೇವಿ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಕೇವಲ 69 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾಗೆ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದರು. ಮೊದಲ 2 ಓವರ್​ಗಳಲ್ಲಿ 1 ಫೋರ್ ಹಾಗೂ 1 ಸಿಕ್ಸ್ ಬಾರಿಸಿ ಶಫಾಲಿ 16 ರನ್ ಕಲೆಹಾಕಿದ್ದರು. ಆದರೆ ಬಿರುಸಿನ ಆಟಕ್ಕೆ ಮುಂದಾದ ಶಫಾಲಿ 3ನೇ ಓವರ್​ನಲ್ಲಿ ಔಟಾದರು. ಇದರ ಬೆನ್ನಲ್ಲೇ ಶ್ವೇತಾ ಸೆಹ್ರಾವತ್ (5) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಯಾದ ಸೌಮ್ಯ ತಿವಾರಿ ಹಾಗೂ ತ್ರಿಶಾ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಮೊದಲ 10 ಓವರ್​ಗಳಲ್ಲಿ ಟೀಮ್ ಇಂಡಿಯಾ 48 ರನ್​ ಕಲೆಹಾಕಿತು. ಇನ್ನು ಗೆಲುವಿನ ಹೊಸ್ತಿಲಲ್ಲಿದ್ದಾಗ 24 ರನ್​ಗಳಿಸಿದ್ದ ತ್ರಿಶಾ ಔಟಾದರು.

ಅಂತಿಮವಾಗಿ 14 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್​ಗಳಿಸುವ ಮೂಲಕ ಟೀಮ್ ಇಂಡಿಯಾ 7 ವಿಕೆಟ್​ಗಳ ಜಯಭೇರಿ ಬಾರಿಸಿತು. ಈ ಮೂಲಕ ಚೊಚ್ಚಲ ಮಹಿಳಾ ಅಂಡರ್ 19 ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್​ ಆಗಿ ಹೊರಹೊಮ್ಮಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist