ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ವಿಶ್ವಕಪ್ ಸಮರ ; ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಹೇಗಿದೆ..!

Twitter
Facebook
LinkedIn
WhatsApp
ಇಂದು ವಿಶ್ವಕಪ್ ಸಮರ ; ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಹೇಗಿದೆ..!

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ಗೆ ಕ್ಷಣಗಣನೆ ಶುರುವಾಗಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ರೋಹಿತ್ ಶರ್ಮಾ ನಾಯಕತ್ವ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ನಡುವೆ ಪ್ರಶಸ್ತಿಗಾಗಿ ಅಂತಿಮ ಕಾದಾಟ ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ಆಯೋಜನೆ ಮಾಡಲಿದೆ. ಇದರಲ್ಲಿ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ.

ಭಾರತ ತಂಡ:

ಭಾರತ ತಂಡ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಗೆದ್ದು ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ಮೆನ್ ಇನ್ ಬ್ಲೂ ಇಡೀ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದೆ ಫೈನಲ್​ಗೆ ಬಂದಿದೆ. ಎಲ್ಲ ಪಂದ್ಯವನ್ನು ಸುಲಭವಾಗಿ ಜಯಿಸಿದ್ದಾರೆ. ತಂಡದಲ್ಲಿ ಬದಲಾವಣೆ ಮಾಡಿದ್ದು ಕೂಡ ಕಡಿಮೆ. ಆದರೆ, ಈಗ ಫೈನಲ್ ಕದನಕ್ಕೆ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾವನ್ನು ಭಾರತ ಒಂದು ಬಾರಿ ಎದುರಿಸಿದೆ. ಹೀಗಾಗಿ ಭಾರತದ ಬೌಲರ್​ಗಳ ಕೆಲ ವರ್ಮವನ್ನು ಅವರು ಅರಿತಿರಬಹುದು. ಇದಕ್ಕಾಗಿ ಬೌಲಿಂಗ್ ವಿಭಾಗದಲ್ಲಿ ಹೊಸ ಆಟಗಾರ ಬರಬಹುದು.

ವಿಶ್ವಕಪ್ ಆರಂಭದಲ್ಲಿ ಮಾರಕವಾಗಿದ್ದ ಮೊಹಮ್ಮದ್ ಸಿರಾಜ್ ಈಗ ಯಾಕೊ ಮಂಕಾದಂತಿದೆ. ಹೀಗಾಗಿ ಇವರು ಜಾಗಕ್ಕೆ ರವಿಚಂದ್ರನ್ ಅಶ್ವಿನ್ ಕರೆತರುವ ಪ್ಲಾನ್ ಭಾರತ ಮಾಡಬಹುದು. ಅಲ್ಲದೆ ಅಶ್ವಿನ್ ಪ್ಲೇಯಿಂಗ್ ಇಲೆವೆನ್​ಗೆ ಬಂದರೆ ಸ್ಪಿನ್ ಜೊತೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲರು. ಉಳಿದಂತೆ ರೋಹಿತ್ ಹಾಗೂ ಗಿಲ್ ಟಿ20 ಮಾದರಿಯಂತೆ ತಂಡಕ್ಕೆ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಪ್ರಸ್ತುತ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಫೈನಲ್​ನಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ನೋಡಬೇಕು.

ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಸೂರ್ಯಕುಮಾರ್​ಗೆ ಅವಕಾಶ ಸಿಕ್ಕಿದ್ದು ಕಡಿಮೆ. ಸಿಕ್ಕ ಸಂದರ್ಭ ತಂಡಕ್ಕೆ ನೆರವಾಗಿದ್ದಾರೆ. ರವೀಂದ್ರ ಜಡೇಜಾ ಫಿನಿಶರ್‌ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರವಿಚಂದ್ರನ್ ಅಶ್ವಿನ್ ಬಂದರೆ ಬ್ಯಾಟಿಂಗ್ ಡೆಪ್ತ್ ಹೆಚ್ಚಲಿದೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಕುಲ್ದೀಪ್ ಯಾದವ್ ಮಾರಕವಾಗಿದ್ದಾರೆ.

ಆಸ್ಟ್ರೇಲಿಯಾ ತಂಡ:

ಇತ್ತ ಆಸೀಸ್ ತನ್ನ ಬ್ಯಾಟಿಂಗ್ ವಿಭಾಗದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಡೇವಿಡ್ ವಾರ್ನರ್ ಮತ್ತು ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಕ್ರಿಕೆಟ್ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸ್ಟೀವ್ ಸ್ಮಿತ್ ಕಡೆಯಿಂದ ಫೈನಲ್​ನಲ್ಲಿ ಒಂದೊಳ್ಳೆ ಇನ್ನಿಂಗ್ಸ್ ಬರಬೇಕು. ಗ್ಲೆನ್ ಮ್ಯಾಕ್ಸ್‌ವೆಲ್ ಅಫ್ಘಾನಿಸ್ತಾನ ವಿರುದ್ಧ ದ್ವಿಶತಕ ಸಿಡಿಸಿ ಅಬ್ಬರಿಸಿದ್ದರು. ಆದರೆ, ಸೆಮೀಸ್​ನಲ್ಲಿ ವಿಫಲರಾಗಿದ್ದರು. ಬೌಲಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್, ಸೀನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್ ಇದ್ದಾರೆ. ಆ್ಯಡಂ ಝಂಪಾ ಸ್ಪಿನ್ನರ್ ಆಗಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ:

ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಪಂದ್ಯಕ್ಕೆ ಮಳೆ ತೊಂದರೆ ಇಲ್ಲ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ