ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

Twitter
Facebook
LinkedIn
WhatsApp
amazon 2

ಮುಂಬೈ: ಸಂಘಟಿತ‌ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಯುಪಿ ವಾರಿಯರ್ಸ್‌ (UP Warriorz) ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ನೇರವಾಗಿ WPL ಫೈನಲ್‌ ಪ್ರವೇಶಿಸಿದೆ.

ಮಂಗಳವಾರ ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದ ಲೀಗ್‌ ಸುತ್ತಿನ ಕೊನೆಯ ಪಂದ್ಯದಲ್ಲಿ ಜಯ ದಾಖಲಿಸುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದು, ನೇರವಾಗಿ ಫೈನಲ್‌ ಪ್ರವೇಶಿಸಿದೆ. ಕ್ರಮವಾಗಿ 2-3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್‌ ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸಲಿವೆ. ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. 

Delhi Capitals vs UP Warriorz WPL 2023: DC thrash UPW by 42 runs despite  Tahlia McGrath heroics | Sports News,The Indian Express

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ವಾರಿಯರ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿತ್ತು. 139‌ ರನ್‌ ಗುರಿ ಪಡೆದ ಡೆಲ್ಲಿ 17.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಿ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. 

ಆರಂಭಿಕರಾಗಿ ಕಣಕ್ಕಿಳಿದ ನಾಯಕಿ ಮೆಗ್‌ ಲ್ಯಾನಿಂಗ್‌ (Meg Lanning), ಶಫಾಲಿ ವರ್ಮಾ ಉತ್ತಮ ಆರಂಭ ನೀಡಿದರು. ಶಫಾಲಿ 16 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 21 ರನ್‌ ಗಳಿಸಿದರೆ, ಮೆಗ್‌ ಲ್ಯಾನಿಂಗ್‌ 23 ಎಸತೆಗಳಲ್ಲಿ 39 ರನ್‌ (5 ಬೌಂಡರಿ, 2 ಸಿಕ್ಸರ್‌) ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಅಲಿಸ್‌ ಕ್ಯಾಪ್ಸಿ 34 ರನ್‌ (4 ಬೌಂಡರಿ, 1 ಸಿಕ್ಸರ್‌) ಗಳಿಸಿದರೆ, ಆಲ್‌ರೌಂಡರ್‌ ಮಾರಿಜಾನ್ನೆ ಕಪ್‌ 31 ಎಸೆತಗಳಲ್ಲಿ 34 ರನ್‌ (4 ಬೌಂಡರಿ, 1 ಸಿಕ್ಸರ್‌) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

WPL: दिल्ली और यूपी की जंग में चमकेंगे युवा सितारे, आखिरी गेंद तक जारी  रहेगा रोमांच! | wpl 2023 delhi capitals vs up warriorz tara norris shafali  verma grace harris players to

ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ 20 ಓವರ್‌ಗಳಲ್ಲಿ ಯುಪಿ ವಾರಿಯರ್ಸ್ ತಂಡ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಪರವಾಗಿ ತಹಿಲಾ ಮೆಕ್‌ಗ್ರಾಥ್ ಅಜೇಯ 58 ರನ್‌ ಗಳಿಸಿ ಏಕಾಂಗಿ ಹೋರಾಟ ನಡೆಸಿದರು. ಇದರೊಂದಿಗೆ ನಾಯಕಿ ಅಲಿಸ್ಸಾ ಹೀಲಿ ಅವರ 36 ರನ್‌ಗಳ ಕೊಡುಗೆ ತಂಡಕ್ಕೆ ನೆರವಾಯಿತು. ಉಳಿದಂತೆ ಯಾರೊಬ್ಬರೂ ಸ್ಥಿರವಾಗಿ ನಿಲ್ಲದ ಕಾರಣ ವಾರಿಯರ್ಸ್‌ ತಂಡ ಸಾಧಾರಣ ಮೊತ್ತವನ್ನಷ್ಟೇ ಗಳಿಸಲು ಶಕ್ತವಾಯಿತು.

delhi capitals beat up warriorz by 42 runs-WPL 2023: ताबड़तोड़ बल्लेबाजी  करने के बाद भी ये खिलाड़ी यूपी वॉरियर्ज को नहीं दिला पाई जीत| Cricket  News,Hindi News

ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ಅಲಿಸ್‌ ಕ್ಯಾಪ್ಸಿ 3 ವಿಕೆಟ್ ಕಿತ್ತರೆ, ರಾಧಾ ಯಾದವ್ 2 ವಿಕೆಟ್, ಜೆಸ್ ಜೊನಾಸನ್‌ 1 ವಿಕೆಟ್‌ ಪಡೆದು ಮಿಂಚಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ