WWE: ಮಾಜಿ ವಿಶ್ವ ಚಾಂಪಿಯನ್ ಬ್ರೇ ವ್ಯಾಟ್ ಇನ್ನಿಲ್ಲ
ನ್ಯೂಯಾರ್ಕ್: ವರ್ಲ್ಡ್ ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾದರು ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು.
36 ವರ್ಷದ ಬ್ರೇ ವ್ಯಾಟ್ ಅವರು ಹೃದಯಾಘಾತದಿಂದ ನಿಧನರಾದರು ಎಂದು ವರದಿಯಾಗಿದೆ.
“ಡಬ್ಲ್ಯೂ ಡಬ್ಲ್ಯೂಇ ಹಾಲ್ ಆಫ್ ಫೇಮರ್ ಮೈಕ್ ರೊಟುಂಡಾ ಅವರಿಂದ ಇದೀಗ ಕರೆ ಬಂದಿದೆ, ಅವರು ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇಎಸ್‌ಪಿಎನ್ ಪ್ರಕಾರ, ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಅವರು ಬಹಿರಂಗಪಡಿಸದ ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸುತ್ತಿರಲಿಲ್ಲ. ಅವರು 2009 ರಿಂದ ಡಬ್ಲ್ಯೂ ಡಬ್ಲ್ಯೂಇ ನೊಂದಿಗೆ ಇದ್ದರು. 2021 ಮತ್ತು 2022ರಲ್ಲಿ ಸಕ್ರಿಯರಾಗಿರದ ರೊಟುಂಡಾ ಕಳೆದ ಸೆಪ್ಟೆಂಬರ್ ನಲ್ಲಿ ಡಬ್ಲ್ಯೂ ಡಬ್ಲ್ಯೂಇ ಗೆ ವಾಪಸಾದರು.
ವ್ಯಾಟ್ ಒಂದು ಬಾರಿ ಡಬ್ಲ್ಯೂ ಡಬ್ಲ್ಯೂಇ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ಯುನಿವರ್ಸಲ್ ಚಾಂಪಿಯನ್‌ಶಿಪ್ ಸೇರಿದಂತೆ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್ ಆಗಿದ್ದರು.
ಬ್ರೆ ವ್ಯಾಟ್ ರೆಸ್ಲೆರ್ ಗಳ ಕುಟುಂಬದಿಂದ ಬಂದವರು. ಅವರ ತಂದೆ ಹಾಲ್ ಆಫ್ ಫೇಮರ್ ಮೈಕ್ ರೊಟುಂಡಾ. ಅವರ ಅಜ್ಜ, ಬ್ಲ್ಯಾಕ್‌ಜಾಕ್ ಮುಲ್ಲಿಗನ್ ಅವರು ವೃತ್ತಿಪರ ಕುಸ್ತಿಪಟುವಾಗಿ ತಮ್ಮ ಛಾಪು ಮೂಡಿಸಿದವರು. ಮಾವಂದಿರಾದ ಬೆರ್ರಿ ಮತ್ತು ಕೆಂಡಾಲ್ ವಿಂಡ್‌ಹ್ಯಾಮ್ ಕೂಡ ಕುಸ್ತಿ ಜಗತ್ತಿನಲ್ಲಿ ವೃತ್ತಿಜೀವನವನ್ನು ಅನುಸರಿಸಿದವರು.
World Badminton ಚಾಂಪಿಯನ್‌ಶಿಪ್ ಸಾತ್ವಿಕ್-ಚಿರಾಗ್ ಕ್ವಾರ್ಟರ್‌ಫೈನಲಿಗೆ
ಕೋಪನ್‌ಹೆಗನ್: ಭಾರತದ ಸ್ಟಾರ್ ಡಬಲ್ಸ್ ಆಟಗಾರರಾದ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಮೂರು ಗೇಮ್‌ಗಳ ಹೋರಾಟದಲ್ಲಿ ಜಯ ಸಾಧಿಸಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಕ್ವಾರ್ಟರ್‌ಫೈನಲ್ ಹಂತಕ್ಕೇರಿದರು. ಇನ್ನೊಂದು ಹೆಜ್ಜೆ ಮುಂದಿಟ್ಟರೆ ಅವರು ಪದಕ ಗೆಲ್ಲುವ ಸಾಧ್ಯತೆಯಿದೆ.
ವಿಶ್ವದ ಎರಡನೇ ರ್‍ಯಾಂಕಿನ ಸಾತ್ವಿಕ್-ಚಿರಾಗ್ ಅವರು ಇಂಡೋನೇಶ್ಯದ ಲಿಯೊ ರಾಲಿ ಕಾರ್ನಾಂಡೊ ಮತ್ತು ಡೇನಿಯಲ್ ಮಾರ್ಟಿನ್ ಅವರನ್ನು 21-15, 19-21, 21-9 ಗೇಮ್‌ಗಳಿಂದ ಉರುಳಿಸಿ ಮುನ್ನಡೆದರು. ಕಳೆದ ಋತುವಿನಲ್ಲಿ ಇಲ್ಲಿ ಚೊಚ್ಚಲ ಬಾರಿ ಕಂಚಿನ ಪದಕ ಜಯಿಸಿದ್ದ ಸಾತ್ವಿಕ್-ಚಿರಾಗ್ ಈ ಋತುವಿನಲ್ಲಿ ಭಾರೀ ಫಾರ್ಮ್ನಲ್ಲಿದ್ದಾರೆ. ನಾಲ್ಕು ಪ್ರಶಸ್ತಿ ಗೆದ್ದಿರುವ ಅವರು ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಕೂಡ ಆಗಿದ್ದಾರೆ.