ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Xiaomi 13: ಭಾರತಕ್ಕೆ ಬರುತ್ತಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಶವೋಮಿ 13 ಸರಣಿ

Twitter
Facebook
LinkedIn
WhatsApp
Xiaomi 13 1

ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಚೀನಾ ಮೂಲದ ಶವೋಮಿ ಕಂಪನಿ ಅಪರೂಪಕ್ಕೆ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈ ವರ್ಷದ ಆರಂಭದಲ್ಲಿ ಶವೋಮಿ (Xiaomi) ತನ್ನ ಬ್ರ್ಯಾಂಡ್​ನಡಿಯಲ್ಲಿ ಶವೋಮಿ 13 ಸರಣಿಯನ್ನು ವಿದೇಶದಲ್ಲಿ ಅನಾವರಣ ಮಾಡಿ ಧೂಳೆಬ್ಬಿಸಿತ್ತು. ಇದೀಗ ಭಾರತದಲ್ಲಿ ಈ ಸ್ಮಾರ್ಟ್​ಫೋನ್ ಸದ್ದು ಮಾಡಲು ಬರುತ್ತಿದೆ. ಶವೋಮಿ 12 ಸರಣಿಯ ಮುಂದುವರೆಗ ಭಾಗವಾಗಿರುವ ಶವೋಮಿ 13 ಸರಣಿ (Xiaomi 13 Series) ಸದ್ಯದಲ್ಲೇ ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಲಿದೆ. ಈ ನೂತನ ಸರಣಿಯಲ್ಲಿ ಶವೋಮಿ 13 ಮತ್ತು ಶವೋಮಿ 13 ಪ್ರೊ ಎಂಬ ಎರಡು ಸ್ಮಾರ್ಟ್​ಫೋನ್​ಗಳು ಅನಾವರಣವಾಗಲಿವೆ. ಈ ಎರಡೂ ಫೋನ್​ಗಳಲ್ಲಿ ಹುಬ್ಬೇರಿಸುವಂತಹ ಫೀಚರ್​ಗಳು ಅಡಕವಾಗಿದೆ.

Xiaomi 13 and 13 Pro announced with SD 8 Gen 2, new Leica cameras -  GSMArena.com news

ಶವೋಮಿ 13 ಪ್ರೊ:

ಶವೋಮಿ 13 ಪ್ರೊ ಸ್ಮಾರ್ಟ್‌ಫೋನ್‌ 6.7-ಇಂಚಿನ LTPO OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್​ನಿಂದ ಕೂಡಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ ಪ್ರೊಟೆಕ್ಷನ್‌ ಪಡೆದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ಹೊಂದಿದೆ. 12GB RAM ಮತ್ತು 512GB ಇನ್‌ಬಿಲ್ಟ್‌ ಸ್ಟೋರೇಜ್‌ ಪಡೆದುಕೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿರುವ ಮೂರೂ ಕ್ಯಾಮೆರಾಗಳು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. 4820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೈರ್ಡ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.

ಸದ್ಯಕ್ಕೆ ಈ ಎರಡೂ ಸ್ಮಾರ್ಟ್​ಫೋನ್​ಗಳು ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿವೆ. ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ. ಚೀನಾದಲ್ಲಿ ಶವೋಮಿ 13 8GM RAM ಮತ್ತು 128GB ಸ್ಟೋರೇಜ್ ಮಾಡೆಲ್‌ ಬೆಲೆ CNY 3,999, ಅಂದರೆ ಭಾರತದಲ್ಲಿ ಸುಮಾರು 47,300ರೂ. ಎನ್ನಬಹುದು. ಹಾಗೆಯೇ 12GB RAM ಮತ್ತು 512GB ಸಂಗ್ರಹದ ಬೆಲೆ CNY 4,999 (ಸುಮಾರು 60,000ರೂ.). ಇನ್ನು ಶವೋಮಿ 13 ಪ್ರೊ 8GB RAM ಮತ್ತು 128GB ಸ್ಟೋರೇಜ್ ಆವೃತ್ತಿಗೆ CNY 4,999 (ಸುಮಾರು 60,000ರೂ.), 12GB RAM ಮತ್ತು 512GB ಸ್ಟೋರೇಜ್ ಮಾದರಿಯ ಬೆಲೆ CNY 6,299 (ಸುಮಾರು 74,500ರೂ) ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ